• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ

Any Mind by Any Mind
January 4, 2022
in ಕರ್ನಾಟಕ
0
ಶೀಘ್ರದಲ್ಲೇ ಕಲುಬರುಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ : ಸಚಿವ ಮುರುಗೇಶ್ ನಿರಾಣಿ ಘೋಷಣೆ
Share on WhatsAppShare on FacebookShare on Telegram

ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರ ಕಲಬುರಗಿಯಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ಕಾರಣಕ್ಕಾಗಿ  ಈ ಭಾಗದಲ್ಲಿ ಜವಳಿ ಪಾಕ್೯ (ಟೆಕ್ಸ್ ಟೈಲ್) ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಘೋಷಿಸಿದರು.

ADVERTISEMENT

ಸೋಮವಾರ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ನಡೆದ ಉದ್ಯಮಿಯಾಗು ,ಉದ್ಯೋಗ ನೀಡು ಹಾಗೂ ಕೈಗಾರಿಕಾ ಆದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂಬಂಧ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆಯನ್ನು ನಡೆಸಲಾಗಿದ್ದು, ಕೇಂದ್ರದಿಂದ ನಮಗೆ ಸಕಾರಾತ್ಮಕ ಸ್ಪಂಧಿಸಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಬೀದರ್ ಸೇರಿದಂತೆ ಈ ಸುತ್ತಮುತ್ತಲ  ಜಿಲ್ಲೆಗಳಲ್ಲಿ ಹತ್ತಿಯನ್ನು ಯಥೇಚ್ಚವಾಗಿ ಬೆಳೆಯುತ್ತಾರೆ. ಇಲ್ಲಿ ಜವಳಿ ಪಾರ್ಕ್ ಪ್ರಾರಂಭವಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಜವಳಿ ಪಾರ್ಕ್ ಪ್ರಾರಂಭಿಸಲು ಬರುವವರಿಗೆ  ಸರ್ಕಾರ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಿದೆ. ಅವರಿಗೆ ಪವನ ಹಾಗೂ , ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವವರಿಂದ  ರಿಯಾಯ್ತಿ ದರದಲ್ಲಿ ವಿದ್ಯುತ್ ನೀಡುವುದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದಲೇ ತರಬೇತಿ ನೀಡಿ ನುರಿತ ಕೌಶಲ್ಯ ಕಾರ್ಮಿಕರನ್ನು ಒದಗಿಸಲಿದ್ದೇವೆ ಎಂದು ಆಶ್ವಾಸನೆ ನೀಡಿದರು.

ಜವಳಿ ಪಾರ್ಕ್ ಆರಂಭವಾದರೆ  ಹತ್ತಿ ನೂಲುವುದು, ಬೀಜ ತೆಗೆಯುವುದು ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡಲು ಸಹಾಯವಾಗುತ್ತದೆ. ಟೆಕ್ಸ್ ಟೈಲ್ ಪಾರ್ಕ್  ಆರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಸರ್ಕಾರ ಅನೇಕ ರೀತಿಯ ನೆರವುಗಳನ್ನು ನೀಡಲಿದೆ ಎಂದು ಭರವಸೆ ಕೊಟ್ಟರು.

 ಈ ಭಾಗವನ್ನು ಟೆಕ್ಸ್ ಟೈಲ್ ಹಬ್ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕೈಗಾರಿಕೆಗಳನ್ನು ಪ್ರಾರಂಭಿಸಲು ಬರುವ  ಉದ್ಯಮಿಗಳಿಗೆ ಅಗತ್ಯವಾದ ನೀರು, ರಸ್ತೆ, ವಿದ್ಯುತ್, ಭೂಮಿ ಎಲ್ಲವನ್ನು ಕಾಲಮಿತಿಯೊಳಗೆ ನೀಡಲಿದೆ. ಉದ್ಯಮಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು  ಅವರು ಮನವಿ ಮಾಡಿದರು.

ಕಲಬರುಗಿಯಲ್ಲಿ ಒಟ್ಟು 1600 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಗಳಿಗೆ ಗುರುತಿಸಲಾಗಿದೆ. ಶೀಘ್ರದಲ್ಲೇ ಇದರ ಭೂ ಸ್ವಾಧೀನ ಪ್ರಕ್ರಿಯೆಯು ಆರಂಭವಾಗಲಿದೆ.  ಇದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಲು ಮುಂದೆ ಬರುವವರ ಸಂಖ್ಯೆ ಅಧಿಕವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಲು ದೇಶ-ವಿದೇಶಗಳಿಂದ ದೊಡ್ಡ ಮಟ್ಟದಲ್ಲಿ ಉದ್ಯಮಿಗಳು ಆಗಮಿಸುತ್ತಾರೆ. ಆದರೆ ನಮ್ಮವರೇ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ ಎಂದರೆ ತುಂಬ ಬೇಸರವಾಗುತ್ತದೆ. ಈ ಭಾಗದಲ್ಲಿ  ಅನೇಕರು ಆರ್ಥಿಕವಾಗಿ ಸಾಕಷ್ಟು ಪ್ರಬಲರಾಗಿದ್ದಾರೆ. ನೀವು ಉದ್ಯಮ ಆರಂಭಿಸಲು ಮುಂದೆ ಬಂದರೆ ಸರ್ಕಾರ ನಿಮಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅಭಯ ನೀಡಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೈಗಾರಿಕಾ ನೀತಿಯು ಇಡೀ ದೇಶಕ್ಕೆ ಮಾದರಿಯಾಗಿದೆ. ಇದು ಉದ್ಯಮಿಗಳಿಗೆ ಮತ್ತು ಹೊಸದಾಗಿ ಆರಂಭಿಸುವವರಿಗೆ ಎಲ್ಲ ರೀತಿಯ ಸಹಾಯ ಒದಗಿಸಲಿದೆ.

ಇದಕ್ಕೂ ಮುನ್ನ ಕೆಲವು ಯಶಸ್ವಿ ಉದ್ಯಮಿಗಳು, ಪರಿಣತರು, ಸೇರಿದಂತೆ ಮತ್ತಿತರರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಯುವ ಸಮೂಹವನ್ನು ಉದ್ಯಮದತ್ತ ಆಕರ್ಷಿಸುವುದು, ಉದ್ಯಮ ಆರಂಭಿಸುವವರಿಗೆ ಇರುವ ವಲಯಗಳು,  ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು,

ಬಂಡವಾಳ ಹೂಡಿಕೆ , ಬ್ಯಾಂಕ್ ನಿಂದ ಸಾಲ ಸೌಲಭ್ಯ ಯಶಸ್ವಿ ಉದ್ಯಮಿಗಳ ಯಶೋಗಾಥೆ, ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಉದ್ಯಮಿದಾರರು ಪರಸ್ಪರ ವಿನಿಮಯ ಮಾಡಿಕೊಂಡರು.

Tags: ಕಲುಬರುಗಿಕೈಗಾರಿಕೆಗಳುಟೆಕ್ಸ್ ಟೈಲ್ ಪಾರ್ಕ್ಮುರುಗೇಶ್‌ ನಿರಾಣಿಸಚಿವ ನಿರಾಣಿ
Previous Post

ಮೇಕೆದಾಟು : ಕಾಂಗ್ರೆಸ್ ಮಾಡುತ್ತಿರುವ ಹೋರಾಟ ನಾಟಕೀಯ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Next Post

ಅಸಹಾಯಕ ತಳಸಮುದಾಯಗಳ ವಿಘಟನೆಯೇ ಅಧಿಕಾರಸ್ಥರ ಬಂಡವಾಳ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಅಸಹಾಯಕ ತಳಸಮುದಾಯಗಳ ವಿಘಟನೆಯೇ ಅಧಿಕಾರಸ್ಥರ ಬಂಡವಾಳ

ಅಸಹಾಯಕ ತಳಸಮುದಾಯಗಳ ವಿಘಟನೆಯೇ ಅಧಿಕಾರಸ್ಥರ ಬಂಡವಾಳ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada