2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ರೋಚವಾಗಿ ಗೆದ್ದು ಬೀಗಿದೆ. ಸರ್ಕಾರ ರಚಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. 135 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ಗೆ ಅನೇಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರೈ ಕೂಡ ಟ್ವಿಟರ್ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಹಿಂದಿನಿಂದಲೂ ಬಿಜೆಪಿ ನಿಲುವುಗಳನ್ನ ವಿರೋಧಿಸುತ್ತಾ ಬಂದಿರುವ ಪ್ರಕಾಶ್ ರೈಗೆ ಈ ಬಾರಿಯ ಚುನಾವಣೆ ಖುಷಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾರನ್ನ ವ್ಯಂಗ್ಯಮಾಡುವ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ನಟ ಪ್ರಕಾಶ್ ರೈ. ಜೊತೆಗೆ `ದ್ವೇಶ, ಬೂಟಾಟಿಕೆಯನ್ನು ಒದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು.. ಬೆತ್ತಲೆಯಾದ ಚಕ್ರವರ್ತಿ’ ಅಂತ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. ಪ್ರಕಾಶ್ ರೈ ಅವರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಪ್ರಕಾಶ್ ರಾಜ್ ಅವರ ಮಾತುಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.