‘ಮ್ಯಾಸಿವ್ ಸ್ಟಾರ್’ ರಾಜವರ್ಧನ್ ನಾಯಕನಾಗಿ ನಟಿಸುತ್ತಿರುವ ಗಜರಾಮ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಬಿಚ್ಚುಗತ್ತಿಯ ಮೂಲಕ ಸ್ಯಾಂಡಲ್ ವುಡ್ ಸಿನಿರಸಿಕರ ರಾಜವರ್ಧನ್ ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದ್ದಾರೆ.
ಇನ್ನು ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡುತ್ತಿರುವ ಗಜರಾಮನಿಗೆ ಜೋಡಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಮೂಲಕ ಸಿನಿರಸಿಕರ ಗಮನ ಸೆಳೆದಿದ್ದ ತಪಸ್ವಿನಿಗೆ ಇದು ಒಟ್ಟಾರೆ ಎರಡನೇ ಸಿನಿಮಾ.
ಈ ಕುರಿತು ಮಾತನಾಡಿರುವ ನಾಯಕಿ ತಪಸ್ವಿನಿ ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ನಾನು ಸೆಲೆಕ್ಟ್ ಆಗಿದ್ದೇ ಆಕಸ್ಮಿಕವಾಗಿ. ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅನ್ನೋದು ನನ್ನ ಉದ್ದೇಶ ಆಗಿರಲಿಲ್ಲ. ಆದ್ರೆ ಇನ್ ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ನೋಡಿ ಚಿತ್ರತಂಡ ನನ್ನ ಸಂಪರ್ಕ ಮಾಡಿದ್ರು. ಕಥೆ ಕೇಳಿ ಇಷ್ಟ ಆಯ್ತು ಒಪ್ಪಿಕೊಂಡೆ ಇದೀಗ ‘ಗಜರಾಮ’ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿದೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ನಂತರ ಸಾಕಷ್ಟು ಸಿನಿಮಾ ಆಫರ್ ಬರುತ್ತಿದೆ. ಆದರೆ, ಗಜರಾಮ ಸಿನಿಮಾದಲ್ಲಿ ನನ್ನ ಪಾತ್ರ ಇಷ್ಟ ಆಯ್ತು. ಹಳ್ಳಿ ಹುಡುಗಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಾನು ಕಾಣಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ ನಾಯಕಿ ತಪಸ್ವಿನಿ ಪೂಣಚ್ಚ.
ಆಕ್ಷನ್ ಮಾಸ್ ಎಂಟಟೈನರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ್ಕಕೆ ಸುನೀಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದು ಮನೋಮೂರ್ತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.