ಉತ್ತರ ಪ್ರದೇಶದ ಜೆಹನಾಬಾದ್ ಪ್ರದೇಶದಲ್ಲಿ 16 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ತನ್ನ ಮನೆಯ ಹೊರಗಿನ ಶೆಡ್‌ನಲ್ಲಿ ಮಲಗಿದ್ದಾಗ, 22 ವರ್ಷದ ವ್ಯಕ್ತಿ ಬಂದು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಲಕಿಯ ತಂದೆ ಮತ್ತು ಕೆಲವು ಗ್ರಾಮಸ್ಥರು ಸೇರಿಕೊಂಡು ಶುಕ್ರವಾರ ಬೆಳಗ್ಗೆ ಬಾಲಕಿಯನ್ನು ಆರೋಪಿಯ ಆವರಣದಿಂದ ರಕ್ಷಿಸಿ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಜೆಹನಾಬಾದ್ ಪೊಲೀಸ್ ಠಾಣೆ ಎಸ್‌ಎಚ್‌ಒ ಕೇಶವದಾಸ್ ವರ್ಮಾ ತಿಳಿಸಿದ್ದಾರೆ.

ಅತ್ಯಾಚಾರ, ಕೊಲೆ ಬೆದರಿಕೆ, ಪೋಕ್ಸೊ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಿಯ ವಿರುದ್ದ ಕೇಸ್ ದಾಖಲಿಸಿದ್ದಾರೆ ಎಂದು ಎಂದು ಕೇಶವದಾಸ್ ವರ್ಮಾ ಹೇಳಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.