• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರಮನೆ ನಗರದಲ್ಲಿ ಅದ್ದೂರಿಯಾಗಿ ನೆರವೇರಿತು “KCL” ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ.

ಪ್ರತಿಧ್ವನಿ by ಪ್ರತಿಧ್ವನಿ
March 31, 2025
in Top Story, ಇತರೆ / Others, ಇದೀಗ, ಕರ್ನಾಟಕ, ಕ್ರೀಡೆ, ಜೀವನದ ಶೈಲಿ, ದೇಶ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಏಪ್ರಿಲ್28 ರಿಂದ ದುಬೈನ ಶಾರ್ಜಾ ಮೈದಾನದಲ್ಲಿ ಕ್ರಿಕೆಟ್ ಟೂರ್ನಿ .

ADVERTISEMENT

ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಸ್ಯಾಂಡಲ್ ವುಡ್ ನಟನಟಿಯರನ್ನು‌ ಹಾಗೂ ತಂತ್ರಜ್ಞರನ್ನು ಒಂದೇ ವೇದಿಕೆಯಲ್ಲಿ ಕಂಡು ಸಂಭ್ರಮಿಸುವಂತೆ ಮಾಡುವ ಸಲುವಾಗಿ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.

ಮೈಸೂರು ನಗರದ ಖಾಸಗಿ ಹೋಟೆಲ್ ನಲ್ಲಿ ತಂಡದ ಆಟಗಾರರ ಹರಾಜು ಪ್ರಕ್ರಿಯೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಮೊದಲು
ಶಾಸಕ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಟರಾದ ಡಾರ್ಲಿಂಗ್ ಕೃಷ್ಣ, ರವಿ ಚೇತನ್, ನಿರ್ದೇಶಕ ತರುಣ್ ಸುಧೀರ್, ಪವನ್ ಒಡೆಯರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್ ಅವರು ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್(KCL) ಸೀಸನ್ ೧ ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ ಶಾರ್ಜಾ ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ. ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾರೆ. ಅವರಿಗಾಗಿಯೇ ಈ ಟೂರ್ನಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಸುಮಾರು ಹತ್ತುಸಾವಿರ ಕನ್ನಡಿಗರನ್ನು ಒಂದುಗೂಡಿಸುವುದೇ “ಕೆ.ಸಿ.ಎಲ್” ನ ಉದ್ದೇಶ ಎಂದರು.

ಟೂರ್ನಿಯಲ್ಲಿ ಹತ್ತು ತಂಡಗಳು ಭಾಗವಹಿಸಲಿದೆ. ಹನ್ನೆರಡು ಓವರ್ ಗಳ ಪಂದ್ಯ ಇದ್ದಾಗಿದ್ದು, ಎರಡು ಗುಂಪಿನಲ್ಲಿ ತಲಾ ಐದು ತಂಡಗಳಿದ್ದು, ಪ್ರತಿ ತಂಡ ನಾಲ್ಕು ಪಂದ್ಯಗಳನ್ನಾಡಲಿದೆ. ಪ್ರತಿ ಗುಂಪಿನ ಟಾಪ್ ಎರಡು ತಂಡಗಳು ನಾಕೌಟ್ ಪಂದ್ಯ ಆಡಲಿದೆ. ಪಂದ್ಯದ ನೇರಪ್ರಸಾರವೂ ಇರಲಿದೆ. ಲೂಸ್ ಮಾದ ಯೋಗಿ, ಡಾರ್ಲಿಂಗ್ ಕೃಷ್ಣ, ತರುಣ್ ಸುಧೀರ್ ಸೇರಿದಂತೆ ಹಲವರು ತಂಡದ ನಾಯಕರಾಗಲಿದ್ದಾರೆ. ಇಂದು ತಂಡದ ಆಟಗಾರರ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದರು.

ಅನಿವಾಸಿ ಕನ್ನಡಿಗ ಸಿರಾಜ್ ಮಾತನಾಡಿ, ಕೋವಿಡ್ ಗೂ ಮುನ್ನ ದುಬೈನಲ್ಲಿ ನಮ್ಮ ಅನಿವಾಸಿ ಕನ್ನಡಿಗರ ಸಂಘ ಹುಟ್ಟಿಕೊಂಡಿತ್ತು.‌ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಕನ್ನಡಿಗರನ್ನು ಒಂದೆಡೆ ಸೇರಿಸುವ ಉದ್ದೇಶ ನಮ್ಮದಾಗಿತ್ತು.ಕೋವಿಡ್ ಸಮಯದಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ವಿಮಾನ ಸೇವೆ ಸೇರಿದಂತೆ ಬೇರೆಬೇರೆ ರೀತಿಯಲ್ಲಿ ನಮ್ಮ ಸಂಘ ನೆರವಾಗಿ ನಿಂತಿದೆ. ಜೊತೆಗೆ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆದರೆ ಒಂದು ದೊಡ್ಡ ಕಾರ್ಯಕ್ರಮ ಮಾಡಿ ಎಲ್ಲರನ್ನೂ ಒಂದೆಡೆ ಸೇರಿಸಲು ಸಾಧ್ಯವಾಗಿರಲಿಲ್ಲ. ಇಂದು ಕ್ರಿಕೆಟ್ ಹೆಚ್ಚು ಜನಪ್ರಿಯವಾಗಿರುವುದರಿಂದ ಕನ್ನಡದ ಸೆಲೆಬ್ರಿಟಿಗಳನ್ನು ದುಬೈಗೆ ಕರೆಸಲು ಈ ಟೂರ್ನಿ ಮಾಡುತ್ತಿದ್ದೇವೆ. ಇದರಿಂದ ಎಲ್ಲಾ‌ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ದುಬೈನಲ್ಲಿನ ಕನ್ನಡಿಗರಿಗೆ ಸಿಗಲಿದೆ ಎಂದರು.

ದುಬೈನಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಒಂದು ಕಡೆ ಸೇರಿ ಸಂಭ್ರಮಿಸಬೇಕು. ಈ ಕ್ರಿಕೆಟ್ ಲೀಗ್ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಬೇರೆಬೇರೆ ಕ್ರೀಡೆಗಳನ್ನು ಆಯೋಜಿಸುವ ಉದ್ದೇಶವಿದೆ ಎಂದರು ಅನಿವಾಸಿ ಕನ್ನಡಿಗ ಶ್ರೀನಿಧಿ.

Tags: a23 moment of the daybest of celebrity cricketbollywood cricket leagueccl leaguecelebrity cricketCelebrity Cricket Leaguecelebrity cricket league 2012celebrity cricket league kannadacelebrity cricket league kannada 2023celebrity cup cricket league 2023cricket leaguekarnataka bulldozerskarnataka celebrity cricket leaguekarnataka latest newsKarnataka Politicstelugu warriors vs karnataka bulldozers
Previous Post

ರಾಜ್ಯದಲ್ಲಿ ಬೆಲೆ ಏರಿಕೆ ನಿತ್ಯ ನಿರಂತರ ..! ಬೃಹತ್ ಪ್ರತಿಭಟನೆಗೆ ಬಿಜೆಪಿ ಪ್ಲಾನ್ ! 

Next Post

ವಿಜಯ್‌ ಸೇತುಪತಿಗೆ ಪುರಿ ಜಗನ್ನಾಥ್‌ ಆಕ್ಷನ್‌ ಕಟ್‌..ಜೂನ್‌ ನಿಂದ ಶೂಟಿಂಗ್‌ ಶುರು

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ವಿಜಯ್‌ ಸೇತುಪತಿಗೆ ಪುರಿ ಜಗನ್ನಾಥ್‌ ಆಕ್ಷನ್‌ ಕಟ್‌..ಜೂನ್‌ ನಿಂದ ಶೂಟಿಂಗ್‌ ಶುರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada