• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನ್ನಭಾಗ್ಯ ಯೋಜನೆಯಿಂದಾಗಿ ಬಂಜಾರ ಸಮುದಾಯ ತಮ್ಮ ಊರುಗಳಲ್ಲೇ ನೆಲೆ ಕಂಡುಕೊಂಡಿತು: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 25, 2021
in ಕರ್ನಾಟಕ, ರಾಜಕೀಯ
0
ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೆ ಸಿಗಲಿಲ್ಲ-  ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಸಿಂಧಗಿಯಲ್ಲಿ ಬಿಜೆಪಿ ವಿರುದ್ದ ಹರಿಹಾಯುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

ADVERTISEMENT

ಸಿಂಧಗಿಯಲ್ಲಿ ಇಂದು ಆಯೋಜಿಸಿದ್ದ ಬಂಜಾರ ಸಮುದಾಯದ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಪರ ಮತಯಾಚನೆ ವೇಳೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ  ಕಿಡಿಕಾರಿದ್ದಾರೆ.

ಬಂಜಾರ ಸಮುದಾಯವರು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತವರು. ಆದರೆ ಇತ್ತೀಚೆಗೆ ಬಿಜೆಪಿಯವರು ಈ ಸಮಾಜದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕಾರಣದಿಂದ ಇಂದು ಸಮಾವೇಶ ನಡೆಸಿ, ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದೇವೆ. ದೇವರಾಜ ಅರಸು ಅವರ ಸರ್ಕಾರದಲ್ಲಿ ಕೆ.ಪಿ ರಾಥೋಡ್ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಬಂಜಾರ ಸಮುದಾಯ ಮೀಸಲಾತಿ ಪಟ್ಟಿಯಲ್ಲಿ ಸಾಮಾನ್ಯ ವರ್ಗದಲ್ಲಿತ್ತು. ಇವರನ್ನು ಹಿಂದುಳಿದ ಜಾತಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದವರು ಅರಸು ಮತ್ತು ರಾಥೋಡ್ ಅವರು. ಈ ಎಸ್.ಸಿ ಮೀಸಲಾತಿ ದೊರೆತ ಕಾರಣಕ್ಕೆ ಇಂದು ಬಂಜಾರ ಸಮುದಾಯ ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆಬರಲು ಸಾಧ್ಯವಾಗಿದೆ  ಎಂದು ಸಿಂಧಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ತಿಳಿಸಿದ್ದಾರೆ.

2013 ರಲ್ಲಿ ಬಸವಜಯಂತಿಯಂದು ನಾನು ಅಧಿಕಾರ ಸ್ವೀಕಾರ ಮಾಡಿದೆ. ಬಸವಣ್ಣನವರ ಸಾಮಾಜಿಕ ಸಮಾನತೆಯ ಕನಸನ್ನು ನನಸು ಮಾಡಬೇಕೆಂದು ನನ್ನ ಐದು ವರ್ಷಗಳ ಆಡಳಿತದುದ್ದಕ್ಕೂ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆ. ಅಧಿಕಾರ ವಹಿಸಿಕೊಂಡ ಮರು ಘಳಿಗೆಯಲ್ಲೇ ಸಂಪುಟ ಸಭೆ ಕರೆದು ಎಲ್ಲಾ ಜಾತಿ ಧರ್ಮಗಳ ಬಡವರಿಗೆ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಕಾರ್ಯಕ್ರಮವನ್ನು ಘೋಷಣೆ ಮಾಡಿದೆ. ಇದರಿಂದ ಉದ್ಯೋಗ ಅರಸಿ ಹೊಟ್ಟೆಪಾಡಿಗಾಗಿ ಗುಳೆ ಹೋಗುತ್ತಿದ್ದ ಬಂಜಾರ ಸಮಾಜದ ಜನರು ತಮ್ಮ ಊರುಗಳಲ್ಲೇ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಆದರೆ ಈಗಿನ ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 5 ಕೆ.ಜಿ ಗೆ ಇಳಿಸಿ ನೀವು ತಿನ್ನುವ ಅನ್ನ ಕಸಿದಿದೆ. 2023 ರಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬಂದಮೇಲೆ ಪ್ರತಿ ಬಡವರಿಗೆ ಹತ್ತು ಕೆ.ಜಿ ಅಕ್ಕಿಯನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಲ್ಲಿದ್ದ ಬಡವರ ಸಾಲವನ್ನು ಮನ್ನಾ ಮಾಡಿದ್ದೆ, ಕ್ಷೀರಧಾರೆ ಯೋಜನೆಯಡಿ ಹೈನುಗಾರರಿಗೆ ಪ್ರತೀ ಲೀಟರ್ ಹಾಲಿಗೆ  5 ರೂಪಾಯಿ ಪ್ರೋತ್ಸಾಹ ಧನ ನೀಡಿದ್ದೆ.  ಬಿಜೆಪಿ ಸರ್ಕಾರ ಬಾಕಿ ಹಣ ಪಾವತಿಸದ ಕಾರಣಕ್ಕೆ ಭಾಗ್ಯಜ್ಯೋತಿ ವಿದ್ಯುತ್ ಸಂಪರ್ಕಗಳನ್ನು ಕಡಿತ ಮಾಡಿತ್ತು, 2013 ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ಈ ಬಾಕಿ ಹಣವನ್ನು ಮನ್ನಾ ಮಾಡಿ, ಕತ್ತಲೆಯಾಗಿದ್ದ ಮನೆಗಳಿಗೆ ಬೆಳಕು ನೀಡಿದ್ದೆವು ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಭೀಮಾನಾಯಕ್ ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಆಗ ನಾವು ವಾರ್ಷಿಕ 200 ಕೋಟಿ ರೂಪಾಯಿಗಳನ್ನು ಸಮಾಜದ ಅಭಿವೃದ್ಧಿಗೆ ನೀಡಿದ್ದೆ. ಬಿಜೆಪಿ ಸರ್ಕಾರ ಈ ಅನುದಾನವನ್ನು ಹತ್ತು ಕೋಟಿಗೆ ಇಳಿಕೆ ಮಾಡಿದೆ. ಸಂತ ಸೇವಾಲಾಲ್ ಅವರ ಜಯಂತಿಯನ್ನು ಸರ್ಕಾರಿ ಜಯಂತಿಯಾಗಿ ಆಚರಣೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದು ನಮ್ಮ ಸರ್ಕಾರ.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಐದು ವರ್ಷಗಳಲ್ಲಿ ನಮ್ಮ ಸರ್ಕಾರ 84,000 ಕೋಟಿ ರೂಪಾಯಿ ಖರ್ಚು ಮಾಡಿತ್ತು. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆಯಾಗುವಂತೆ ಎಸ್.ಸಿ.ಪಿ / ಟಿ.ಎಸ್.ಪಿ ಕಾಯ್ದೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ ಎಂದು ತಿಳಿಸಿದ್ದಾರೆ.

ತಾಂಡಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಾಂತಿಕಾರಕ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯಿದೆಯನ್ನು ಜಾರಿಗೊಳಿಸಿ, ಲಕ್ಷಾಂತರ ಜನರಿಗೆ ಭೂಮಿಯ ಒಡೆತನದ ಹಕ್ಕು ನೀಡಿದ್ದು ನಮ್ಮ ಸರ್ಕಾರ.

ನಾವು ಮತ್ತೆ ಅಧಿಕಾರಕ್ಕೆ ಬಂದಮೇಲೆ ಬಂಜಾರ ಸಮುದಾಯದ ಕುಲಕಸುಬಾದ ಕಸೂತಿ ವೃತ್ತಿಯನ್ನು ಅಭಿವೃದ್ಧಿ ಪಡಿಸಲು 100 ಕೋಟಿ ಅನುದಾನ ನೀಡುತ್ತೇವೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಗೆ ತಮ್ಮ ಮತ ನೀಡುವ ಮೂಲಕ ಗೆಲ್ಲಿಸಿ ಕೊಡಬೇಕು ಎಂದು ಕೈಮುಗಿದು ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ವಿನಂತಿಸಿಕೊಂಡಿದ್ದಾರೆ.

Tags: budgetByElectionbypollCongress PartyCovid 19Fundinghanagalsindhagiಕರೋನಾಕೋವಿಡ್-19ಬಂಜಾರಬಂಜಾರ ಅಭಿವೃದ್ದಿ ನಿಗಮಬಿಜೆಪಿ
Previous Post

ಶಿವರಾಮ ಕಾರಂತ ಬಡಾವಣೆ ಮನೆಗಳ ನೆಲಸಮ: ಸರಕಾರ, ಬಿಡಿಎ ವಿರುದ್ಧ ಹೆಚ್ ಡಿಕೆ ಕಿಡಿ

Next Post

ಒಂದು ಕನ್ನಡ ಶಾಲೆಯ ಕತೆ-ವ್ಯಥೆ: 1.40 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾದರೂ ಶಾಲೆ ಪ್ರಾರಂಭಕ್ಕಿಲ್ಲ ಅನುಮತಿ: ಬೆಂಗಳೂರಿನತ್ತ ಗುಳೆ ಹೊರಟ ಬಾಲಕರು!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಒಂದು ಕನ್ನಡ ಶಾಲೆಯ ಕತೆ-ವ್ಯಥೆ: 1.40 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾದರೂ ಶಾಲೆ ಪ್ರಾರಂಭಕ್ಕಿಲ್ಲ ಅನುಮತಿ: ಬೆಂಗಳೂರಿನತ್ತ ಗುಳೆ ಹೊರಟ ಬಾಲಕರು!

ಒಂದು ಕನ್ನಡ ಶಾಲೆಯ ಕತೆ-ವ್ಯಥೆ: 1.40 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾದರೂ ಶಾಲೆ ಪ್ರಾರಂಭಕ್ಕಿಲ್ಲ ಅನುಮತಿ: ಬೆಂಗಳೂರಿನತ್ತ ಗುಳೆ ಹೊರಟ ಬಾಲಕರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada