• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rajakaluve: ರಾಜ್ಯದಲ್ಲಿ ರಾಜಕಾಲುವೆ ಬಫರ್‌ ವಲಯ ಅರ್ಧದಷ್ಟು ಕಡಿತ..!

ಪ್ರತಿಧ್ವನಿ by ಪ್ರತಿಧ್ವನಿ
August 1, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ಸಭೆಯ ತೀರ್ಮಾನದಂತೆ ನೀಡಲಾಗಿರುವ ವರದಿಗೆ ಸರ್ಕಾರ ಅನುಮೋದನೆ ನೀಡಿದೆ. ಬಫರ್ ವಲಯ ಕಡಿಮೆಗೊಳಿಸುವ ಕುರಿತು, ನಗರಾಭಿವೃದ್ಧಿ ಇಲಾಖೆ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ. ಕೆರೆಗಳ ‘ಸಂರಕ್ಷಿತ ಪ್ರದೇಶ’ವನ್ನು ಕಡಿಮೆ ಮಾಡಲು ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ (KTCDA) ಕಾಯ್ದೆಗೆ ತಿದ್ದುಪಡಿ ತರಲು ಜುಲೈ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. 10 ಗುಂಟೆ ವಿಸ್ತೀರ್ಣದವರೆಗಿನ ಕೆರೆಗಳಿಗೆ ಬಫರ್ ವಲಯ ಇರುವುದಿಲ್ಲ’ ಎಂಬುದು ಹೊಸ ತಿದ್ದುಪಡಿಯಾಗಿದೆ.

ADVERTISEMENT

ರಾಜಕಾಲುವೆ ಬಫ‌ರ್ ವಲಯ ಕೆಟಿಸಿಡಿಎ ವ್ಯಾಪ್ತಿಗೆ ಬರದಿರುವುದರಿಂದ, ಸಮಿತಿಯ ತೀರ್ಮಾನದಂತೆ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ. ಮಳೆನೀರು ಹರಿಸುವ ರಾಜಕಾಲುವೆಗಳ ಬಫರ್ ವಲಯವನ್ನು ಈಗಿರುವ ವ್ಯಾಪ್ತಿಗಿಂತ ಅರ್ಧದಷ್ಟು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಕೆರೆಗಳು ಮತ್ತು ರಾಜಕಾಲುವೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ‘ಸಂರಕ್ಷಿತ ಪ್ರದೇಶ’ವನ್ನು ನಿಗದಿಪಡಿಸಲು ಹಾಗೂ ಬಫರ್‌ ವಲಯದಲ್ಲಿ ಸಾರ್ವಜನಿಕ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಕೆಟಿಸಿಡಿಎ ಕಾಯ್ದೆ ತಿದ್ದುಪಡಿ ತರಲು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯ ಮಂತ್ರಿಯವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಜುಲೈ 10ರಂದು ನಡೆದ ಸಮಿತಿ ಸಭೆಯಲ್ಲಿ, ಕೆರೆಗಳು ಹಾಗೂ ರಾಜಕಾಲುವೆಗಳ ಬಫ‌ರ್ ವಲಯ ವ್ಯಾಪ್ತಿಯನ್ನು ಮರು ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಅದರ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಪ್ರಥಮ, ದ್ವಿತೀಯ ಮತ್ತು ತೃತೀಯ ರಾಜಕಾಲುವೆಗಳನ್ನು ಈ ಹಿಂದೆ ಸೂಕ್ತವಾಗಿ ವ್ಯಾಖ್ಯಾನಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸಮಿತಿ, ರಾಜಕಾಲುವೆಗಳ ಬಫರ್ ವಲಯ ನಿಗದಿಪಡಿಸುವ ಮುನ್ನ, ರಾಜಕಾಲುವೆಗಳನ್ನು ಹೊಸದಾಗಿ ವ್ಯಾಖ್ಯಾನಿಸಿದೆ.

ರಾಜಕಾಲುವೆಗಳ ಬಫರ್ ವಲಯ ನಿಗದಿಪಡಿಸುವುದು ಕೆಟಿಸಿಡಿಎ ಕಾಯ್ದೆ ವ್ಯಾಪ್ತಿಯಲ್ಲಿ ಇಲ್ಲದಿರುವುದ ರಿಂದ ನಗರಾಭಿವೃದ್ಧಿ ಇಲಾಖೆಯಿಂದ ಪ್ರತ್ಯೇಕ ಅಧಿಸೂಚನೆ ಹೊರಡಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಸಲಹೆಯನ್ನು ಸಭೆ ಒಪ್ಪಿದೆ. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (NGT), ಸುಪ್ರೀಂ ಕೋರ್ಟ್‌ ಆದೇಶಗಳ ಬಗ್ಗೆ ಕಾನೂನು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿಯವರು ಅಡ್ವಕೇಟ್ ಜನರಲ್ ಅಭಿಪ್ರಾಯದಂತೆ ನೀಡಿದ ಸಲಹೆಗಳಂತೆ ಕೆರೆ ಹಾಗೂ ರಾಜಕಾಲುವೆಗಳ ಬಫರ್ ವಲಯದ ಸಭೆಯಲ್ಲಿ ನಿಗದಿಪಡಿಸಲಾಗಿದೆ. ಕೆರೆಗಳ ಏಕರೂಪದ 30 ಮೀಟರ್ ‘ಸಂರಕ್ಷಿತ ಪ್ರದೇಶ’ವನ್ನು, ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬದಲಿಸಲು, ಕೆಟಿಸಿಡಿಎ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಅನುಮೋದನೆ ನೀಡಿತ್ತು. ಬಫರ್ ವಲಯ ಅನ್ನು ಮತ್ತಷ್ಟು ಕಡಿಮೆ ಮಾಡಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿರುವುದರಿಂದ, ಪ್ರಸ್ತಾವವನ್ನು ಮತ್ತೆ ಸಿದ್ದಪಡಿಸಲಾಗುತ್ತಿದೆ.

ರಾಜಕಾಲುವೆಗಳಿಗೆ ಹೊಸ ವ್ಯಾಖ್ಯಾನ
ಪ್ರಾಥಮಿಕ ರಾಜಕಾಲುವೆ: ಕಂದಾಯ ಇಲಾಖೆಗಳಲ್ಲಿ ನೈಸರ್ಗಿಕ ಕಾಲುವೆ/ ನಾಲಾಗಳಾಗಿದ್ದು, ಕೆರೆಯಿಂದ ಕೆರೆಗೆ ಅಥವಾ ಕೆರೆಯಿಂದ ನದಿಗೆ ಮಳೆನೀರು ಹರಿಸುವ ಕಾಲುವೆಗಳು.
ದ್ವಿತೀಯ ರಾಜಕಾಲುವೆ: ಕಂದಾಯ ಇಲಾಖೆಗಳಲ್ಲಿ ನೈಸರ್ಗಿಕ ಕಾಲುವೆ/ ನಾಲಾಗಳಾಗಿದ್ದು, ಕೆರೆಗಳಿಗೆ ಅಥವಾ ಪ್ರಾಥಮಿಕ ರಾಜಕಾಲುವೆಗೆ ಮಳೆ ನೀರನ್ನು ಹರಿಸುವ ಕಾಲುವೆಗಳು.
ತೃತೀಯ ರಾಜಕಾಲುವೆ: ಕಂದಾಯ ಇಲಾಖೆಗಳಲ್ಲಿ ನೈಸರ್ಗಿಕ ಕಾಲುವೆ/ ನಾಲಾಗಳಾಗಿದ್ದು, ದ್ವಿತೀಯ ಹಂತದ ರಾಜಕಾಲುವೆಗೆ ಮಳೆ ನೀರು ಹರಿಸುವ ಕಾಲುವೆಗಳು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar videoKTCDANGTRajakaluvesiddaramaiah
Previous Post

ಐಟಿ..ಇಡಿ..ಸಿಬಿಐ ಏನಾದರೂ ಮಾಡಲಿ, ನಾವು ಕಾನೂನು ಪಾಲನೆ ಮಾಡುತ್ತಿದ್ದೇವೆ : ಪ್ರಿಯಾಂಕ ಖರ್ಗೆ 

Next Post

ಖಾಸಗಿ‌ ಕಂಪನಿಯಲ್ಲಿ ಐಟಿ ಪರಿಶೀಲನೆಗೂ ಸ್ಮಾರ್ಟ್ ಮೀಟರ್‌ಗೂ ಸಂಬಂಧವಿಲ್ಲ..!

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ಖಾಸಗಿ‌ ಕಂಪನಿಯಲ್ಲಿ ಐಟಿ ಪರಿಶೀಲನೆಗೂ ಸ್ಮಾರ್ಟ್ ಮೀಟರ್‌ಗೂ ಸಂಬಂಧವಿಲ್ಲ..!

ಖಾಸಗಿ‌ ಕಂಪನಿಯಲ್ಲಿ ಐಟಿ ಪರಿಶೀಲನೆಗೂ ಸ್ಮಾರ್ಟ್ ಮೀಟರ್‌ಗೂ ಸಂಬಂಧವಿಲ್ಲ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada