• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣ; ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು:ಬಿ.ಕೆ.ಹರಿಪ್ರಸಾದ್

ಪ್ರತಿಧ್ವನಿ by ಪ್ರತಿಧ್ವನಿ
December 7, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದರು.

ADVERTISEMENT

ಬೆಲೆಕೇರಿ ಅಕ್ರಮ ಅದಿರು ಕಳ್ಳ ಸಾಗಾಣೆ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಅದಿರನ್ನು ಅದಾನಿ ಕಂಪನಿಯವರು ದೊಡ್ಡ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಮಾಡಿರುತ್ತಾರೆ. ಅದರಲ್ಲಿ ಮಲ್ಲಿಕಾರ್ಜುನ ಶಿಪ್ಪಿಂಗ್, ಅದಾನಿ ಎಂಟರ್ ಪ್ರೈಸಸ್, ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ ಮತ್ತು ರಾಜ್ ಮಹಲ್ ಕಂಪನಿಗಳು ಈ ಅದಿರನ್ನು ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುತ್ತಿರುವುದನ್ನು ಲೋಕಾಯುಕ್ತ ತನಿಖೆಯಲ್ಲಿ ಪತ್ತೆಯಾಗಿತ್ತು. ಎಲ್ಲಾ ಕಂಪನಿಗಳ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆಯೂ ಲೋಕಾಯುಕ್ತ ಸಂಸ್ಥೆ ಶಿಫಾರಸ್ಸು ನೀಡಿತ್ತು.

ಅದಾನಿ ಕಂಪನಿ ಹೊರತಾಗಿ ಇತರೆ ಮೂರು ಕಂಪನಿ ವಿರುದ್ಧ ಸಿಬಿಐ ಚನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಂಡು ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸಧ್ಯ ಈ ಶಿಕ್ಷೆಯನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟಿದೆ.

ಆದರೆ ಈ ಮೂರು ಕಂಪನಿಗಳಿಗಂತ ಘೋರ ಆರೋಪ ಎದುರಿಸುತ್ತಿರುವ ಅದಾನಿ ಕಂಪನಿ ವಿರುದ್ಧ ಯಾವುದೇ ತನಿಖೆ ನಡೆಯುತ್ತಿಲ್ಲ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಅದಾನಿ ಕಂಪನಿ ಲಂಚ ನೀಡಿ ಈ ಅಕ್ರಮ ಅದಿರು ಸಾಗಾಣೆ ಮಾಡುತ್ತಿತ್ತು ಎಂಬ ಆರೋಪದ ಬಗ್ಗೆ ವಿಚಾರಣೆ ನಡೆದಿಲ್ಲ. ಲೋಕಾಯುಕ್ತರು ಅಧಾನಿ ಕಂಪನಿ ಕಂಪ್ಯೂಟರ್ ವಶಪಡಿಸಿಕೊಂಡಾಗ ಅದರಲ್ಲಿ ಕಂಪನಿಯವರು ಈ ಶಾಖೆಗೆ ಕಳುಹಿಸಿರುವ ಮೇಲ್ ನಲ್ಲಿ ಯಾವ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಹಣ ನೀಡಬೇಕು ಎಂಬ ವಿವರಗಳು ಇರುತ್ತವೆ ಎಂದು ಲೋಕಾಯುಕ್ತ ವರದಿಯ 51ನೇ ಪುಟದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

ಈ ಪ್ರಕರಣದಲ್ಲಿ ಬೇರೆ ಕಂಪನಿಗಳ ವಿರುದ್ಧ ಲೋಕಾಯುಕ್ತ ಹಾಗೂ ಸಿಬಿಐ ಸಂಸ್ಥೆಗಳು ಕ್ರಮ ಕೈಗೊಂಡಿರುವ ರೀತಿಯಲ್ಲಿ ಅದಾನಿ ಕಂಪನಿ ವಿರುದ್ಧವೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅದಾನಿ ಕಂಪನಿ ಮೋದಿ ಅವರ ಕೃಪಾಪೋಷಿತ ಕಂಪನಿಯಾಗಿದ್ದು, ದೇಶದಲ್ಲಿ ಏನೇ ಅವ್ಯವಹಾರ ಮಾಡಿದರೂ ಈ ಕಂಪನಿ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿ ತನಿಖೆಯಾಗಿರುವ ವರದಿ ಮೇಲೆ ಕ್ರಮ ಕೈಗೊಳ್ಳಬೇಕು.

ಅದಾನಿ ಕಂಪನಿ ಸಮೂಹ ಕರ್ನಾಟಕ ರಾಜ್ಯದ ಸಂಪತ್ತನ್ನು ಕಳ್ಳಸಾಗಾಣಿಕೆ ಮಾಡುವಾಗ ಅರಣ್ಯ ಇಲಾಖೆಗಳು ಮುಟ್ಟುಗೋಲು ಹಾಕಿಕೊಂಡಿರುವುದು ಸ್ಪಷ್ಟವಾಗಿದೆ. ಈ ಕಂಪನಿಗಳ ವಿರುದ್ಧ ಲೋಕಾಯುಕ್ತ ವರದಿಯಂತೆ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುತ್ತೇನೆ. ಅಮೆರಿಕದಲ್ಲಿ ಅದಾನಿ ಅವರ ಮೇಲೆ ಪ್ರಕರಣ ದಾಖಲಿಸುವಾಗ ರಾಜ್ಯದಲ್ಲಿ ನಮ್ಮ ಸಂಪತ್ತು ಲೂಟಿ ಮಾಡಿರುವ ಪ್ರಕರಣವನ್ನು ಮುಟ್ಟದಿದ್ದರೆ ಎಲ್ಲರ ಮೇಲೂ ಸಂಶಯ ಬರುವಂತಾಗುತ್ತದೆ.ಈ ಪ್ರಕರಣದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಿದ್ದರೂ ಕ್ರಮ ಜರುಗಿಸಬೇಕು” ಎಂದು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರು ಉಪಸ್ಥಿತರಿದ್ದರು.

Tags: Adani companyagainst Adani CompanyBelekericase of illegallyCongress Partyillegal mineKPCC officeLokayukta investigationpage 51
Previous Post

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

Next Post

ಚಾಮರಾಜನಗರದಲ್ಲಿ CM ಸಿದ್ದರಾಮಯ್ಯ ಅಬ್ಬರದ ಭಾಷಣ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ಚಾಮರಾಜನಗರದಲ್ಲಿ CM ಸಿದ್ದರಾಮಯ್ಯ ಅಬ್ಬರದ ಭಾಷಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada