• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಲ್ಲರಿಗೂ ಉಚಿತ ಲಸಿಕೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಂಗಿ ಊದಿದೆ – ಹೆಚ್ಡಿ ಕುಮಾರಸ್ವಾಮಿ ಕಿಡಿ

Any Mind by Any Mind
April 29, 2021
in ಕರ್ನಾಟಕ
0
ಎಲ್ಲರಿಗೂ ಉಚಿತ ಲಸಿಕೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಂಗಿ ಊದಿದೆ – ಹೆಚ್ಡಿ ಕುಮಾರಸ್ವಾಮಿ ಕಿಡಿ
Share on WhatsAppShare on FacebookShare on Telegram

ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ  ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ.  18 ವರ್ಷ ಮೇಲ್ಪಟ್ಟ ದೇಶದ  ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು  ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು ಎಂದು ಅವರು ಹೇಳಿದ್ದಾರೆ.

ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ.
1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021

ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು. “ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ” ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು? ಎಂದು ಅವರು ಪ್ರಶ್ನಿಸಿದ್ದಾರೆ.

ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ  ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ  ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ
ಈ ಲೋಕದ ಭುಂಜಕರು
ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ
ನಾನು ನೀನೆಂಬ ಉಭಯವಳಿದು
ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ
– ಜಕ್ಕಣಯ್ಯ
10/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021

18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ. ದೇಶದಾದ್ಯಂತ ಕೊರೋನಾ ಸೋಂಕಿತರು ಬೆಡ್,  ಆಕ್ಸಿಜನ್, ಅಂಬುಲೆನ್ಸ್, ಔಷಧಿಗಳಿಲ್ಲದೆ ಪರದಾಡುತ್ತಿದ್ದಾರೆ. ಸತ್ತವರ ಅಂತ್ಯಸಂಸ್ಕಾರಕ್ಕೂ  ಪಾಳಿಯಲ್ಲಿ ನಿಲ್ಲಬೇಕಾದ ವ್ಯವಸ್ಥೆ ಸೃಷ್ಟಿಸಿದ ಕೇಂದ್ರ- ರಾಜ್ಯ ಸರ್ಕಾರಗಳ ದಯನೀಯ ವೈಫಲ್ಯದ ಬಗ್ಗೆ  ದೇಶದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ  ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು. ಲಸಿಕೆ ನೀಡುವ ವಿಷಯದಲ್ಲಿ ಜನತೆ ಸಿನಿಕರಾಗದಂತೆ  ಎಚ್ಚರವಹಿಸುವುದು ಸರ್ಕಾರಗಳ ಜವಾಬ್ದಾರಿ.  ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಉಡಾಫೆಯ ಧೋರಣೆ ತಳೆಯುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

Previous Post

ಆಕ್ಸಿಜನ್‌ಗಾಗಿ ಅಳುತ್ತಾ ಪೊಲೀಸರ ಕಾಲಿಗೆ ಬಿದ್ದ ವ್ಯಕ್ತಿ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Next Post

ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡಬೇಕು – ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡಬೇಕು – ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡಬೇಕು - ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada