ನವದೆಹಲಿ: ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಗೆ ಬೇಕಾಗಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಆರೋಪಿಸಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ ಬಳಿಕ ಮಾತನಾಡಿದ ಮುನಿಯಪ್ಪ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ. ಆದರೆ, ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿದ್ಧಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇದ್ದರೂ ಸಹ ರಾಜಕೀಯ ದುರುದ್ದೇಶದಿಂದ ನಮ್ಮ ಬೇಡಿಕೆಯನ್ನು ನಿರಾಕರಿಸಿದ್ಧಾರೆ. ಸಚಿವ ಪಿಯೂಶ್ ಗೋಯೆಲ್ರನ್ನು ಭೇಟಿ ಮಾಡಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಸಿದ್ದೇನೆ. ಆದರೂ, ಅವರು ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ ಎಂದು ಕಿಡಿಕಾರಿದ್ಧಾರೆ.
