• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

ಪ್ರತಿಧ್ವನಿ by ಪ್ರತಿಧ್ವನಿ
October 21, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ: ಸಿ.ಎಂ ಮೆಚ್ಚುಗೆ

ADVERTISEMENT


ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗತ್ತೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ‌ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದರು. ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ ಎಂದರು.

GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ತೀರಿ ಎಂದು ಸಾರ್ವಜನಿಕರಿಗೆ ಪ್ರಶ್ನಿಸಿದರು. “ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ. GST ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು.

ಒಂದು ಲಕ್ಷದ 20 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದೀವಿ. ಕೇಂದ್ರದಿಂದ ನಯ ಪೈಸೆ ಕೊಡುತ್ತಿಲ್ಲ ಎಂದು ವಿವರಿಸಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದರು.

RSS ನವರು ನಮ್ಮನ್ನು ಬಿಡಲ್ಲ ಅಂತ ಆರ್.ಅಶೋಕ್ ಹೇಳ್ತಿದ್ದರು. ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಸೇರಿ ಯಾರದ್ದೂ ಸ್ವಂತ ಮಾತು ಇಲ್ಲ. RSS ನವರು ಬರೆದುಕೊಟ್ಟಿದ್ದನ್ನು ಓದಿ ಹೋಗುವುದಷ್ಟೆ ಇವರ ಕೆಲಸ ಎಂದರು. ವಿಧಾನಸಭಾ ಅಧಿವೇಶನ‌ ವೇಳೆ ಒಮ್ಮೆ ಆರ್.ಅಶೋಕ್ ಗೆ ಕೇಳಿದ್ದೆ. ಆಗ ಆರ್.ಅಶೋಕ್ ಅವರು, “ಏನು ಮಾಡೋದು ಸರ್. RSS ನವರು ಒಬ್ರು ಬಂದು ಕೂತಿರ್ತಾರೆ. ಅವರು ಹೇಳಿದ್ದನ್ನು ಹೇಳದೇ ಹೋದರೆ ನಮ್ಮನ್ನು ಬಿಡಲ್ಲ ಸಾರ್” ಎಂದು ಉತ್ತರಿಸಿದ್ದರು ಎಂದು ವಿವರಿಸಿದರು.

ಒಂದು ಲೇಯರ್ ತಾರ್ ರಸ್ತೆ ಹಾಕಲು ಸೂಚನೆ: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ತಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು.

ಮೋದಿ ಮೋದಿ ಅಂತೀರಲ್ಲ: ಅಮವಾಸೆ ಸೂರ್ಯ ರಾಜ್ಯಕ್ಕೆ ಆಗುತ್ತಿರುವ ದ್ರೋಹ ಪ್ರಶ್ನಿಸಿದ್ದಾರಾ? ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ನಿಮ್ಮ ಪರವಾಗಿ ಪಾರ್ಲಿಮೆಂಟಿನಲ್ಲಿಬಾಯಿ ಬಿಟ್ಟಿದ್ದಾರಾ ಹೇಳಿ ಎಂದು ಸಿ.ಎಂ ಪ್ರಶ್ನಿಸಿದರು. ಸಂಸದ ತೇಜಸ್ವಿ ಸೂರ್ಯ(Tejasvi Surya). ನಾನು ಇವರನ್ನು ಅಮವಾಸೆ ಸೂರ್ಯ ಅಂತ ಕರಿತೀನಿ. ರಾಜ್ಯದ ಆಗುತ್ತಿರುವ ಅನ್ಯಾಯ, ದ್ರೋಹದ ಬಗ್ಗೆ ಅಮವಾಸೆ ಸೂರ್ಯ ಇವತ್ತಿನವರೆಗೆ ಬಾಯಿ ಬಿಟ್ಟಿದ್ದಾರಾ? ಸಚಿವರದ ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಮೋಸ, ದ್ರೋಹದ ಬಗ್ಗೆ ಒಂದೇ ಒಂದು ದಿನ ಬಾಯಿ ಬಿಟ್ಟಿದ್ದಾರಾ ? ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಅವರು ಗೆದ್ದ ಪಾರ್ಲಿಮೆಂಟ್ ಕ್ಷೇತ್ರಕ್ಕಾಗಲೀ ಏನು ಸಿಕ್ಕಿದೆ ಹೇಳಿ ಎಂದು ಪ್ರಶ್ನಿಸಿದರು‌.

ವ್ಯವಸ್ಥಿತವಾಗಿ ಬೆಂಗಳೂರು ಅಭಿವೃದ್ಧಿ. ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ (Dinesh Gundurao) ಅವರಂಥಾ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದರು.

Tags: c m siddaramaiahChikpeteCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videoDInesh G RaogunduraoKarnatakakarnataka cm siddaramaiahkarnataka next cm siddaramaiahSiddaramaiah CMsiddaramaiah karnataka cm
Previous Post

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

Next Post

ಪೊಲೀಸರ ಮಕ್ಕಳ‌ ಜೊತೆ ಪೊಲೀಸ್ ಕಮಿಷನರ್ ದೀಪಾವಳಿ ಆಚರಣೆ

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ಪೊಲೀಸರ ಮಕ್ಕಳ‌ ಜೊತೆ ಪೊಲೀಸ್ ಕಮಿಷನರ್ ದೀಪಾವಳಿ ಆಚರಣೆ

ಪೊಲೀಸರ ಮಕ್ಕಳ‌ ಜೊತೆ ಪೊಲೀಸ್ ಕಮಿಷನರ್ ದೀಪಾವಳಿ ಆಚರಣೆ

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
Top Story

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada