ನೂತನ ಸಂಸದ ಭವನದ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಪರ ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ, 19 ಪ್ರಮುಖ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡಿವೆ ಆದರೆ ಕೆಲವು ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಗೆ ಬೆಂಬಲವನ್ನು ಕೂಡ ವ್ಯಕ್ತಪಡಿಸಿವೆ
ಅದರಲ್ಲಿ ಜಾತ್ಯಾತೀತ ಜನತಾದಳ ಕೂಡ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಬೆಂಬಲವನ್ನ ಸೂಚಿಸಿದೆ ಜೊತೆಗೆ ಪಕ್ಷದ ಪ್ರಮುಖರು ಕೂಡ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗಲಿದ್ದಾರೆ ಅಂತ ಹೇಳಲಾಗುತ್ತಿದೆ. ಇನ್ನು ನೂತನ ಸಂಸತ್ ಭವನದ ಉದ್ಘಾಟನೆ ವಿಚಾರದ ಸಂಬಂಧ ಉಂಟಾಗಿರುವ ವಿವಾದಗಳ ಕುರಿತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ ಈ ವೇಳೆ ಮಾತನಾಡಿದ ಅವರು.
“ಈಗ, ಅವರು (ಕಾಂಗ್ರೆಸ್) ಅಧ್ಯಕ್ಷರ ಬಗ್ಗೆ ಹೆಚ್ಚಿನ ಗೌರವ ಮತ್ತು ಪ್ರೀತಿಯನ್ನು ತೋರಿಸುತ್ತಿದ್ದಾರೆ. ಹಾಗಿದ್ದರೆ ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ಏಕೆ ಕಾಂಗ್ರೆಸ್‌ನವರು ಅಭ್ಯರ್ಥಿ ಹಾಕಿದ್ರು? ಈಗ ಬಿಜೆಪಿಯವರು ಆದಿವಾಸಿಗಳನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲವೂ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ಸಮಾಜದ ಒಂದು ವರ್ಗದ ಮತಗಳನ್ನು ಗಳಿಸಲು ಮಾತ್ರ” ಅಂತ ಹೇಳಿದ್ದಾರೆ
ಒಟ್ಟಾರೆಯಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ನೂತನ ಸಂಸತ್ ಭಾವನದ ಉದ್ಘಾಟನೆ ವಿಚಾರಕ್ಕೆ ಬೆಂಬಲವನ್ನ ವ್ಯಕ್ತಪಡಿಸಿದ್ದು, ಇದರ ಜೊತೆಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ನಡೆ ಏನು ಎಂಬ ಕುತೂಹಲವನ್ನ ಕೂಡ ಹುಟ್ಟು ಹಾಕಿದೆ