ಬೆಳಗಾವಿ : ಈ ಬಾರಿ ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ನಾನಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟವಾಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನನಗೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಬೇಕು ಎಂಬುದಷ್ಟೇ ಮುಖ್ಯ ಎಂದಿದ್ದಾರೆ.
ಯಮಕನಮರಡಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಪಿತೂರಿ ನಡೆದಿದೆ. ಆದರೆ ಕೇವಲ ಭಾಷಣ ಮಾಡುವವರನ್ನು ಜನರು ನಂಬೋದಿಲ್ಲ. ಜನರು ಕೆಲಸವನ್ನು ನೋಡುತ್ತಾರೆ. ನಾಳೆ ಅಂತಿಮವಾಗಿ ಜನರ ತೀರ್ಮಾನ ಏನು ಎನ್ನುವುದು ತಿಳಿಯಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಮಗೆ ಯಾವುದೇ ಭೀತಿಯಲ್ಲಿ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಪಕ್ಷದ ನಾಯಕರು ಸೂಚನೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು .