ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ.
ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಉಸಿರಾಟ ಸಮಸ್ಯೆಯಿಂದ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ...
Read moreDetails