ನಟ ದರ್ಶನ್ (Darshan) ಅಭಿನಯದ ಸಿನಿಮಾ ಡೆವಿಲ್ (Devil) ಶೂಟಿಂಗ್ ಬಹುತೇಕ ಮುಕ್ತಾಯವಾಗಿದ್ದು ಇನ್ನೇನು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗಿದೆ. ಈಗಾಗಲೇ ಚಿತ್ರತಂಡ ಸಂಪೂರ್ಣ ಟಾಕಿ ಪೋರ್ಷನ್ (Talking portion) ಶೂಟಿಂಗ್ ಮುಗಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದೀಗ ಡ್ಯಾನ್ಸ್ ಮತ್ತು ಫೈಟಿಂಗ್ ಸೀಕ್ವೆನ್ಸ್ ಶೂಟಿಂಗ್ ಗಳು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಚಿತ್ರತಂಡ ದರ್ಶನ್ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ನೀಡಿದೆ.

ಹೌದು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್ ಜೈಲುಪಾಲಾದ ನಂತರ ಡೆವಿಲ್ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಂತುಹೋಗಿತ್ತು. ಆದ್ರೆ ದರ್ಶನ್ ಜಾಮೀನು ಪಡೆದ ನಂತರ ಮತ್ತೆ ಸಿನಿಮಾದ ಶೂಟಿಂಗ್ ಆರಂಭಾಸಲಾಗಿ ,ಇದೀಗ ಬಹುತೇಕ ಮುಕ್ತಾಯದ ಹಂತ ತಲುಪಿದೆ.

ಹೀಗಾಗಿ ಡೆವಿಲ್ ಸಿನಿಮಾ ಈಗ ಹೊಸ ಅಪ್ಡೇಟ್ ಕೊಟ್ಟಿದೆ. ಡೆವಿಲ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಮಾಡಲು ಚಿತ್ರತಂಡ ಮುಂದಾಗಿದೆ.ಈ ಬಗ್ಗೆ ಜೈ ಮಾತ ಪ್ರೊಡಕ್ಷನ್ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ.
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19th ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಹಾಗು ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಗಳ ಸಮ್ಮುಖದಲ್ಲೂ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ ಸದಾ ಹೀಗೆ ಇರಲಿ ಎಂದು ಪೋಸ್ಟ್ ಮಾಡಿದ್ದು, ಅಭಿಮಾನಿಗಳ ನಿರೀಕ್ಷೆ ಗರಿಗೆದರಿದೆ.