ಬಾಗಲಕೋಟೆ: ಚುನಾವಣಾ (Lok Sabha Elections 2024) ಕಾರ್ಯಕ್ಕೆ ನೇಮಕಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ನಡೆದಿದೆ. ಮೃತ ಸಿಬ್ಬಂದಿಯನ್ನು ಗೋವಿಂದಪ್ಪ ಎಂದು ಗುರುತಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ನಿಲ್ದಾಣದ ಗೇಟ್ ಹತ್ತಿರ ಬಂದಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಅವರು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ.

ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಗೋವಿಂದಪ್ಪ ಅವರು ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಸಾವನ್ನಪ್ಪಿದ ಶಿಕ್ಷಕ ಮೃತರು ಮುಧೋಳದ ಬಿದರಿ ಶಾಲೆಯಲ್ಲಿ ಶಿಕ್ಷಕರಾಗಿ (Teacher) ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.