ಕರ್ನಾಟಕದಲ್ಲಿ ಏಪ್ರಿಲ್ 17 ರಂದು ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇಂದು ಮತದಾನ ಫಲಿತಾಂಶ ಪ್ರಕಟವಾಗಿದ್ದು, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಭಾರೀ ಅಂತರದ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು. ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಟ್ವಿಟರ್ ಮೂಲಕ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸಿದ್ದಾರೆ.
ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕರೋನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ನಡೆಸದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.