ತುಮಕೂರು:ಗಣೇಶನ ವಿಸರ್ಜನೆಗೆ (dissolution of Ganesha)ಹೋಗಿ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ತಂದೆ, ಮಗ Father, son ಸೇರಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.
ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. 50 ವರ್ಷದ ರೇವಣ್ಣ, ರೇವಣ್ಣ ಪುತ್ರ 20 ವರ್ಷದ ಶರತ್ ಹಾಗೂ 28 ವರ್ಷದ ದಯಾನಂದ್ ಮೃತ ದುರ್ದೈವಿಗಳು. ಸ್ಥಳಕ್ಕೆ ದಂಡಿನ ಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾರಸಂದ್ರ ಗ್ರಾಮದಲ್ಲಿ ಕೂರಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಗಣೇಶ ಮೂರ್ತಿಯನ್ನ ನೀರಿನಲ್ಲಿ ವಿಸರ್ಜನೆ ಮಾಡುವಾಗ ದುರಂತ ಸಂಭವಿಸಿದೆ. ತಂದೆ ರೇವಣ್ಣ ಹಾಗೂ ಪುತ್ರ ಶರತ್ ಜೊತೆಗೆ ಯುವಕ ದಯಾನಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಯಾನಂದ್‌ಗೆ ಇತ್ತೀಚೆಗೆಷ್ಟೇ ಮದುವೆ ಆಗಿತ್ತು.