• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

ಪ್ರತಿಧ್ವನಿ by ಪ್ರತಿಧ್ವನಿ
June 27, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ ಬ್ಲಾಕ್‌ಬಸ್ಟರ್ ಚಲನಚಿತ್ರ ‘ರಂಗಿತರಂಗ'(Rangitharanga), ಈಗ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ADVERTISEMENT

ನಿರ್ಮಾಪಕ ಎಚ್.ಕೆ. ಪ್ರಕಾಶ್: “ಹತ್ತು ವರ್ಷಗಳ ನಂತರವೂ ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ!”

“ನಾನು ನಿರೂಪ್ ನಟಿಸಿದ್ದ ಒಂದು ಟೆಲಿಫಿಲಂ ನೋಡಿ ಮೆಚ್ಚಿಕೊಂಡಿದ್ದೆ. ಅವರೊಂದಿಗೆ ಸಿನಿಮಾ ಮಾಡಬೇಕೆಂದು ನಿರೂಪ್ ಅವರ ತಂದೆ ಸುಧಾಕರ್ ಭಂಡಾರಿ ಅವರನ್ನು ಸಂಪರ್ಕಿಸಿದಾಗ, ಅವರು ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದ ಪ್ರೀ-ಪ್ರೊಡಕ್ಷನ್‌ನಲ್ಲಿ ತೊಡಗಿಸಿಕೊಂಡಿದ್ದರು. ಆಗ ಅನೂಪ್ ಅವರ ಬಳಿ ಕಥೆ ಕೇಳಿದೆ. ಹಾಡುಗಳನ್ನು ಕೇಳಿದ ಕೂಡಲೇ ಈ ಸಿನಿಮಾ ನಾನೇ ಮಾಡಬೇಕು ಎಂದು ತೀರ್ಮಾನಿಸಿದೆ. ಆ ಚಿತ್ರವೇ ‘ರಂಗಿತರಂಗ’. ಯಶಸ್ಸಿನ ಉತ್ತುಂಗಕ್ಕೇರಿ ಈಗ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಚಿತ್ರದಿಂದಾಗಿ, ಹತ್ತು ವರ್ಷಗಳ ನಂತರವೂ ನನ್ನನ್ನು ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ. ನಿಮ್ಮೆಲ್ಲರ ಪ್ರೋತ್ಸಾಹದೊಂದಿಗೆ, 2025ರ ಜುಲೈ 4 ರಂದು ‘ರಂಗಿತರಂಗ’ ಚಿತ್ರವನ್ನು ಮರು-ಬಿಡುಗಡೆ ಮಾಡುತ್ತಿದ್ದೇವೆ,” ಎಂದು ನಿರ್ಮಾಪಕ ಎಚ್.ಕೆ. ಪ್ರಕಾಶ್ ಹೇಳಿದರು.

ನಿರ್ದೇಶಕ ಅನೂಪ್ ಭಂಡಾರಿ: “ಅಮೆರಿಕಾದಲ್ಲಿ ಕನ್ನಡಕ್ಕೆ ಹೊಸ ಮಾರುಕಟ್ಟೆ ಸೃಷ್ಟಿಸಿತು!”

“ವಿದೇಶದಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದ ನಾನು ಹಾಲಿವುಡ್ ಸ್ಟಾರ್ ರಸೆಲ್ ಹಾರ್ವರ್ಡ್ ಅವರೊಂದಿಗೆ ಅಂತರರಾಷ್ಟ್ರೀಯ ಕಿರುಚಿತ್ರಗಳನ್ನು ಮಾಡಿದ್ದೆ. ‘ರಂಗಿತರಂಗ’ದ ಪ್ರೀ-ಪ್ರೊಡಕ್ಷನ್ ಕಾರ್ಯದಲ್ಲಿರುವಾಗ, ಈ ಚಿತ್ರ ನಾನೇ ಮಾಡಬೇಕೆಂದು ಎಚ್.ಕೆ. ಪ್ರಕಾಶ್ ಅವರ ಆಸೆಯನ್ನು ನೋಡಿ ಅವರ ಉತ್ಸಾಹಕ್ಕೆ ಕೈಜೋಡಿಸಿದೆ. ಸಾಯಿಕುಮಾರ್ ಅವರನ್ನು ಹೊರತುಪಡಿಸಿ, ಬಹುತೇಕ ಎಲ್ಲ ಕಲಾವಿದರು ಹೊಸಬರಾಗಿದ್ದರು. ನಿರೂಪ್ ಭಂಡಾರಿ, ರಾಧಿಕಾ ಚೇತನ್, ಅವಂತಿಕಾ ಶೆಟ್ಟಿ, ಅರವಿಂದ್ – ಎಲ್ಲರ ಸಂಘಟಿತ ಶ್ರಮವೇ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣ. ಛಾಯಾಗ್ರಾಹಕ ವಿಲಿಯಂ ಡೇವಿಡ್ ನನ್ನ ಕಲ್ಪನೆಗೆ ಸೂಕ್ತ ದೃಶ್ಯಗಳನ್ನು ಸಂಯೋಜಿಸಿ ಯಶಸ್ಸಿಗೆ ಕಾರಣರಾದರು.
2015ರ ಜುಲೈ 3ರಂದು ನಮ್ಮ ಚಿತ್ರ ಬಿಡುಗಡೆಯಾದಾಗ, ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಆದರೆ, ನಮ್ಮ ನಿರ್ಮಾಪಕರಿಗೆ ಚಿತ್ರ ಗೆಲ್ಲುತ್ತದೆ ಎಂಬ ಬಲವಾದ ನಂಬಿಕೆ ಇತ್ತು, ಅದು ಸುಳ್ಳಾಗಲಿಲ್ಲ. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಬಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಸೂಪರ್ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ 4 ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ,” ಎಂದು ನಿರ್ದೇಶಕ ಅನೂಪ್ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದರು.

ಹಿರಿಯ ನಟ ಸಾಯಿಕುಮಾರ್ : “ನನ್ನ ಎರಡು ಕಣ್ಣುಗಳು!”
“ಪೊಲೀಸ್ ಸ್ಟೋರಿ ಮತ್ತು “ರಂಗಿತರಂಗ”

ಈ ಎರಡು ಚಿತ್ರಗಳು ನನ್ನ ಎರಡು ಕಣ್ಣುಗಳು. ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ” ಎಂದು ಹಿರಿಯ ನಟ ಸಾಯಿಕುಮಾರ್ ಶುಭ ಹಾರೈಸಿದರು.

ನಾಯಕ ನಿರೂಪ್ ಭಂಡಾರಿ: “ಅಣ್ಣನ ಮೊದಲ ಚಿತ್ರಕ್ಕೆ ನಾನೇ ಹೀರೋ ಎಂದಾಗ ಖುಷಿ ಅಷ್ಟಿಷ್ಟಲ್ಲ!”

“ನಾನು ಐಟಿ ಉದ್ಯೋಗಿಯಾಗಿದ್ದರೂ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದೆ. ರತನ್ ಠಾಕೂರ್ ಗ್ರಾಂಟ್ ಅವರ ನಟನಾ ಶಾಲೆಯಲ್ಲಿ ನಟನೆ ಅಭ್ಯಾಸ ಮಾಡಿದೆ. ಅಣ್ಣನ ನಿರ್ದೇಶನದ ಕಿರುಚಿತ್ರಗಳಿಗೆ ನಾನೇ ಹೀರೋ. ಬೆಳ್ಳಿತೆರೆಯ ಮೇಲೆ ಅನೂಪ್ ನಿರ್ದೇಶನದ ಮೊದಲ ಚಿತ್ರಕ್ಕೂ ನಾನೇ ನಾಯಕ ಎಂದು ತಿಳಿದಾಗ ಆದ ಖುಷಿ ಅಷ್ಟಿಷ್ಟಲ್ಲ. ಮೊದಲ ದೃಶ್ಯದಲ್ಲೇ ನಾನು ಸಾಯಿಕುಮಾರ್ ಅವರೊಂದಿಗೆ ಫೈಟ್ ಮಾಡಬೇಕಿತ್ತು. ಆಗ ನನಗಾದ ಭಯ ಈಗಲೂ ಕಣ್ಣ ಮುಂದೆ ಇದೆ. ಅಮೆರಿಕಾಗೆ ಹೋದಾಗ ಅಲ್ಲಿ ನಮ್ಮ ಚಿತ್ರವನ್ನು ನೋಡಲು ಬಂದಿದ್ದ ಜನಸಾಗರ ಕಂಡು ಬಹಳ ಖುಷಿಪಟ್ಟಿದ್ದೆ. ಇಂತಹ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕನಾದ ಅಣ್ಣನಿಗೆ ಧನ್ಯವಾದಗಳು,” ಎಂದು ನಾಯಕ ನಿರೂಪ್ ಭಂಡಾರಿ ತಮ್ಮ ಅನುಭವ ಹಂಚಿಕೊಂಡರು.

ನಾಯಕಿ ರಾಧಿಕಾ ನಾರಾಯಣ್ : “ಇನ್ನೂ ‘ರಂಗಿತರಂಗ’ ಮೂಲಕವೇ ಗುರುತಿಸುತ್ತಾರೆ !”

“ನಾನು ಐಟಿ ಉದ್ಯೋಗಿ. ಅನೂಪ್ ಅವರು ಈ ಚಿತ್ರದ ಕಥೆ ಹೇಳಿದಾಗ ನಟಿಸಲು ಬಹಳ ಇಷ್ಟವಾಯಿತು. ಚಿತ್ರ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರೂ, ಈಗಲೂ ನನ್ನನ್ನು ‘ರಂಗಿತರಂಗ’ದ ಮೂಲಕವೇ ಗುರುತಿಸುತ್ತಾರೆ,” ಎಂದು ನಾಯಕಿ ರಾಧಿಕಾ ನಾರಾಯಣ್ ತಿಳಿಸಿದರು.

ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸಿದ್ದ ಅರವಿಂದ್ ತಮ್ಮ ಅನುಭವ ಹಂಚಿಕೊಂಡರು. ಛಾಯಾಗ್ರಾಹಕ ವಿಲಿಯಂ ಡೇವಿಡ್ ಛಾಯಾಗ್ರಹಣದ ಬಗ್ಗೆ ಮಾತನಾಡಿದರು. ಕಾರ್ಯಕಾರಿ ನಿರ್ಮಾಪಕ ಸುಧಾಕರ್ ಭಂಡಾರಿ ಅವರು ‘ರಂಗಿತರಂಗ’ ಆರಂಭವಾದಾಗಿನಿಂದ ಬಿಡುಗಡೆಯಾಗುವವರೆಗೂ ನಡೆದ ಸ್ವಾರಸ್ಯಕರ ಘಟನೆಗಳ ಕುರಿತು ಮಾಹಿತಿ ನೀಡಿದರು. ವಿತರಕ ಹೇಮಂತ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: Anup BandariAravindAvantika ShettyBahubaliHK PrakashKannada movieNirup BandariPolice StoryRadhika ChethanRangitharangaSai KUmarSudhakar BandariViliyam David
Previous Post

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

Next Post

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
Next Post

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada