• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಮೊದಲ ಹಾಡು ಬಿಡುಗಡೆ. .

ಪ್ರತಿಧ್ವನಿ by ಪ್ರತಿಧ್ವನಿ
April 17, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಶಿವನ ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ .

ADVERTISEMENT

ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ”, “ಬ್ಲಿಂಕ್” ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಮೊದಲ ಹಾಡು MRT ಮ್ಯೂಸಿಕ್(ಲಹರಿ) ಮೂಲಕ ಬಿಡುಗಡೆಯಾಗಿದೆ. “ಪ್ರೇಮ ಪೂಜ್ಯಂ”, “ಕೌಸಲ್ಯ ಸುಪ್ರಜಾ ರಾಮ” ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ನಾಗಾರ್ಜುನ ಶರ್ಮ ಅವರು ಬರೆದಿರುವ “ಹರ ಓಂ” ಎಂಬ ಶಿವನ ಕುರಿತಾದ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಹಾಡು ಸಹ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಕನ್ನಡದಲ್ಲಿ ಶಿಲ್ಪ ಹಾಗೂ ತೆಲುಗಿನಲ್ಲಿ ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಉಷಾ ಭಂಡಾರಿ ಹಾಗೂ ದರ್ಶನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಲಹರಿ ವೇಲು ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಸಿಂಪಲ್ ಸುನಿ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಇದು ಮೊದಲ ನಿರ್ದೇಶನದ ಚಿತ್ರ‌. ನಾನು, ರಕ್ಷಿತ್ ಶೆಟ್ಟಿ ಹಾಗೂ ಸಚಿನ್ ಅವರು ಸೇರಿ ಪಿನಾಕ ಎಂಬ ವಿ.ಎಫ್.ಎಕ್ಸ್ ಸ್ಟುಡಿಯೋ ಸಹ ನಡೆಸುತ್ತಿದ್ದೇವೆ. ನಿರ್ಮಾಪಕ ಪ್ರಕಾಶ್ ಅವರು “ಅವನ್ನೇ ಶ್ರೀಮನ್ನಾರಾಯಣ” ಚಿತ್ರದ ಸಮಯದಿಂದಲೂ ಪರಿಚಯ. ಈ ಚಿತ್ರದ ಕಥೆ ಕೇಳಿದ ಅವರು ನಿರ್ಮಾಣಕ್ಕೆ ಮುಂದಾದರು. “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಇಂದು “ಹರ ಓಂ” ಎಂಬ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ‌. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಹಾಡು ಬಿಡುಗಡೆಯಾಗಿದೆ. ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ನಲ್ಲಿ ಈ ಹಾಡು ಬರುತ್ತದೆ. ಚಿತ್ರದ ಕಥೆಗೆ ಹಾಗೂ ಈ ಹಾಡಿಗೂ ಸಂಬಂಧವಿದೆ. ಈ ವರ್ಷದ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು ನಿರ್ದೇಶಕ ಅಭಿಷೇಕ್.

“ರಂಗಿತರಂಗ” ಚಿತ್ರದಿಂದ ನಿರ್ಮಾಪಕನಾದೆ. ಇದು ನನ್ನ ನಿರ್ಮಾಣದ ಆರನೇ ಚಿತ್ರ. “ರಂಗಿತರಂಗ” ಚಿತ್ರದ ಹಾಡುಗಳು ಲಹರಿ ಸಂಸ್ಥೆಯಿಂದ ಬಿಡುಗಡೆಯಾಗಿತ್ತು. ಈ ಚಿತ್ರದ ಹಾಡುಗಳು ಸಹ ಲಹರಿ ಸಂಸ್ಥೆಯಿಂದಲೇ ಬಿಡುಗಡೆಯಾಗಿದೆ. ವೇಲು ಅವರು ಒಂದೊಳ್ಳೆ ಮೊತ್ತ‌ ಸಹ ನೀಡಿದ್ದಾರೆ. ನಿರ್ದೇಶಕ ಅಭಿಷೇಕ್ ಉತ್ತಮ ಕಥೆ ಮಾಡಿಕೊಂಡಿದ್ದಾರೆ. ನಮ್ಮ “ರಂಗಿತರಂಗ” ಚಿತ್ರ ಹತ್ತು ವರ್ಷಗಳ ಹಿಂದೆ ಜುಲೈ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ಸಹ‌ ಜುಲೈನಲ್ಲೇ ಬಿಡುಗಡೆ ಮಾಡುತ್ತೇವೆ ಎಂದರು ನಿರ್ಮಾಪಕ ಪ್ರಕಾಶ್.

ಕಳೆದ ವರ್ಷ ಇದೇ ಸಮಯಕ್ಕೆ ನನ್ನ “ಬ್ಲಿಂಕ್” ಚಿತ್ರ ಬಿಡುಗಡೆಯಾಗಿತ್ತು. ಒಂದು ವರ್ಷದ ನಂತರ ನಿಮ್ಮನೆಲ್ಲಾ ಭೇಟಿ ಮಾಡುತ್ತಿದ್ದೇನೆ. ಇನ್ನೂ, ಇಂದು ಬಿಡುಗಡೆಯಾಗಿರುವ ಈ ಚಿತ್ರದ ಹಾಡು ತುಂಬಾ ಚೆನ್ನಾಗಿದೆ. ವಿಶೇಷವೆಂದರೆ ಈ ಹಾಡಿನಲ್ಲಿ ನನ್ನ ಗುರುಗಳು ಹಾಗೂ ನಾನು ಪಾಠ ಹೇಳಿ ಕೊಟ್ಟಿರುವ ಹುಡುಗರು ಅಭಿನಯಿಸಿದ್ದಾರೆ ಎಂದು ನಾಯಕ ದೀಕ್ಷಿತ್ ಶೆಟ್ಟಿ ತಿಳಿಸಿದರು.

ನನ್ನ ದಿನಚರಿ ಆರಂಭವಾಗುವುದೆ ಶಿವನಾಮ ಸ್ಮರಣೆಯಿಂದ. ನಮ್ಮ ಚಿತ್ರದ ಈ ಹಾಡನ್ನು ಕೇಳಿದ ಮೇಲಂತೂ ಎಷ್ಟು ಸಲ ಗುನುಗಿದ್ದೇನೊ ಲೆಕ್ಕವಿಲ್ಲ. ಅಷ್ಟು ಅದ್ಭುತವಾಗಿದೆ “ಹರ ಓಂ” ಹಾಡು ಎಂದರು ನಾಯಕಿ ಬೃಂದಾ ಆಚಾರ್ಯ.

ಹಾಡು ಬರೆದಿರುವ ನಾಗಾರ್ಜುನ ಶರ್ಮ, ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು, ನಾಯಕನ ಸ್ನೇಹಿತರಾಗಿ ನಟಿಸಿರುವ ಶ್ರೀವತ್ಸ, ಶ್ರೇಯಸ್ ಶರ್ಮ, ಅಶ್ವಿನ್, ವಿನುತ್ ಹಾಗೂ ನೃತ್ಯ ಸಂಯೋಜನೆ ಮಾಡಿರುವ ಉಷಾ ಭಂಡಾರಿ ಮತ್ತು ದರ್ಶನ್ ಮುಂತಾದವರು “ಹರ ಓಂ” ಹಾಡಿನ ಕುರಿತು ಮಾತನಾಡಿದರು. ಉಷಾ ಭಂಡಾರಿ ಅವರು ಈ ಹಾಡಿನಲ್ಲಿ ಅಭಿನಯ ಕೂಡ ಮಾಡಿದ್ದಾರೆ.

Tags: Abhishek MAvane Shrimann NarayanBank of BagyalakshmiBlinkBrunda AcharyaDeekshith ShettyDiyakannada cinemaKannada movieLahari MusicMRT MusiqRangitarangasandalwood
Previous Post

ನಾಳೆಯಿಂದ ಲಾರಿ ಮುಷ್ಕರ ತೀವ್ರ.. ಸರ್ಕಾರದಿಂದ ಸಂಧಾನಕ್ಕೆ ಆಹ್ವಾನ

Next Post

ಮುಸ್ಲಿಂ ಬಾಂಧವರ ಜೊತೆ ಸುಧೀರ್ಘ ಚರ್ಚೆ ನಡೆಸಿದ ಮೋದಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಮುಸ್ಲಿಂ ಬಾಂಧವರ ಜೊತೆ ಸುಧೀರ್ಘ ಚರ್ಚೆ ನಡೆಸಿದ ಮೋದಿ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!