ಭಾರಿ ಮಳೆಯಿಂದಾಗಿ ಬೆಂಗಳೂರು ನಗರ ನಿವಾಸಿಗಳ ಪಾಡು ಹೇಳತೀರದಾಗಿದೆ. ಪ್ರತಿ ಬಾರಿ ಮಳೆ ಬಂದಾಗಲೂ ನಗರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗುತ್ತದೆ. ರಸ್ತೆಗಳು ಜಲಾವೃತವಾಗುವುದು ಸಾಮಾನ್ಯವಾಗಿದೆ. ಈ ಕುರಿತು ಪ್ರತಿಕ್ರಿಹಿಸಿರುವ ಸಚಿವ ಆರ್ ಅಶೋಕ್, ಪ್ರಕೃತಿ ಸಹಜವಾಗಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳುರಿನಲ್ಲಿ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆಯಿಂದ ರಸ್ತೆ ತುಂಬಾ ನೀರು ನಿಂತಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಇದು ಪ್ರಕೃತಿ ಸಹಜವಾಗಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಪ್ರವಾಹ ಎನ್ನುವುದು ಸರಕಾರದ ಕೈನಲ್ಲಿರುವುದಿಲ್ಲ ಎಂದು ಹೇಳಿದ್ದಾರೆ.