
ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ವ್ಯಾಪ್ತಿಯ ಅರಸುಹೊಸಕಟ್ಟೆಯ ಕೆರೆಯಲ್ಲಿ ಸಿಮೆಂಟ್ ಕಂಬದ ಬ್ಯಾರಿಕೇಡ್ ದಾಟಲಾರದೆ ಸಿಲುಕಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ.

ಎಂದಿನಂತೆ ಶನಿವಾರ ರಾತ್ರಿ ಕಾಡಿನಿಂದ ಹೊರಬಂದು ಹೊಟ್ಟೆ ತುಂಬಿಸಿಕೊಂಡ ಸಲಗ ಭಾನುವಾರ ಮುಂಜಾನೆ ಅರಣ್ಯಕ್ಕೆ ಮರಳುವ ವೇಳೆ ಈ ಘಟನೆ ನಡೆದಿದೆ.
ಸುತ್ತ ಮುತ್ತಲ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಭತ್ತ,ರಾಗಿ ಫಸಲನ್ನು ತಿಂದು ತುಳಿದು ನಾಶಪಡಿಸುತ್ತಿದ್ದ ಕಾಡಾನೆ ಕೊನೆಗೆ ಜೆ.ಸಿ.ಬಿ ತಂದು ಕಾಡಾನೆಯ ಹಿಂಭಾಗದಿಂದ ಮೇಲೆತ್ತಿ ಸಿಮೆಂಟ್ ಕಂಬ ಅಲ್ಲಾಡಿಸಿ ಕಾಡಾನೆಯನ್ನು ಕಾಡು ಸೇರಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.