ಬೆಂಗಳೂರು : ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆ ಮಾಡಿದ್ದು 33 ಸಚಿವರು ಸಿದ್ದು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ನೂತನ ಸಚಿವರಿಗೆ ಖಾತೆ ಕೂಡ ಹಂಚಿಕೆಯಾಗಿದೆ. ಈ ಎಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ .

ಬೆಂಗಳೂರಿನಲ್ಲಿ ಸಚಿವರಿಗೆ ವಾರ್ನಿಂಗ್ ನೀಡಿರುವ ಸಿಎಂ ಸಿದ್ದರಾಮಯ್ಯ ಹೊಸಬರು ಶಾಸಕರು ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಮೂರ್ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಹಾಸನ, ಚಿಕ್ಕಮಗಳೂರು, ಹಾವೇರಿ ಭಾಗಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಗ್ಗೆ ಅಸಮಾಧಾನ ಇರೋದು ಸಹಜ ಎಂದಿದ್ದಾರೆ.
ನೂತನ ಸಚಿವರಿಗೆ ನೀಡಲಾದ ಖಾತೆಯನ್ನು ಅಳೆದು ತೂಗಿ ನೀಡಲಾಗಿದೆ, ಯಾರೂ ಇದರ ಬಗ್ಗೆ ಮತ್ತೆ ಚರ್ಚೆ ಮಾಡುವಂತಿಲ್ಲ. ಕೊಟ್ಟ ಖಾತೆಯನ್ನು ಅದು ಇದು ಎನ್ನದೇ ನಿಭಾಯಿಸಬೇಕು ಎಂದು ಸಿದ್ದರಾಮಯ್ಯ ವಾರ್ನಿಂಗ್ ನೀಡಿದ್ದಾರೆ.