• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಲ್ವಡಿ ಅರಸರು ಮಾದರಿ ಗತಕಾಲದ ಅಭಿವೃದ್ಧಿಯ ವೈಭವ ಮೈಸೂರಿನಲ್ಲಿ ಮರುಕಳಿಸಬೇಕು : CM ಸಿದ್ದರಾಮಯ್ಯ

Any Mind by Any Mind
November 5, 2023
in Top Story, ಕರ್ನಾಟಕ
0
ನಾಲ್ವಡಿ ಅರಸರು ಮಾದರಿ ಗತಕಾಲದ ಅಭಿವೃದ್ಧಿಯ ವೈಭವ ಮೈಸೂರಿನಲ್ಲಿ ಮರುಕಳಿಸಬೇಕು : CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಜನರ ನಡುವೆ ಇದ್ದರೆ ಅಧಿಕಾರಿಗಳ ಜನಪ್ರಿಯತೆಯೂ ಹೆಚ್ಚುತ್ತದೆ. ಜನರ ಸಮಸ್ಯೆಗಳೂ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿ ಪರಿಹಾರ ಒದಗಿಸಲು ಸಾಧ್ಯ ಎಂದು ಸಲಹೆ ನೀಡಿದರು.

ದಸರಾ ಜನರ ಹಬ್ಬ. ಆದ್ದರಿಂದ ಜನರ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯ. ಇದು ಈ ಬಾರಿಯೂ ಯಶಸ್ವಿಯಾಗಿದೆ. ಮುಂದಿನ ಬಾರಿ ಜನರ ಜತೆ ಪೂರ್ವಭಾವಿ ಸಭೆಗಳನ್ನು ನಡೆಸಿ ದಸರಾವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಿ ಎಂದು ಕರೆ ನೀಡಿದರು. ಅಧಿಕಾರಿಗಳಿಗೆ ಜನಪರವಾದ ಮನಸ್ಸು, ಕಾಳಜಿ, ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ. ಕಳೆದ ಐದು ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ಇಡೀ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿ ಎಂದು ಸೂಚನೆ ನೀಡಿದರು.

ನಾಲ್ವಡಿ ಅರಸರು ಮಾದರಿ ಗತಕಾಲದ ಅಭಿವೃದ್ಧಿಯ ವೈಭವ ಮೈಸೂರಿನಲ್ಲಿ ಮರುಕಳಿಸಬೇಕು. ನಾಲ್ವಡಿ ಅರಸರು ಮಾಡಿದ ನೀರಾವರಿ, ಕೃಷಿ, ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಗಳು ನಮಗೆ ಮಾದರಿಯಾಗಲಿ. ಅವರ ಕಾಲದ ಅಭಿವೃದ್ಧಿಯ ವೈಭವ ಜಿಲ್ಲೆಯಲ್ಲಿ ಮರುಕಳಿಸಬೇಕು ಎಂದರು. ಮೈಸೂರನ್ನು ಅಭಿವೃದ್ಧಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಕರೆದೊಯ್ಯಿರಿ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಟಾರ್ಗೆಟ್ ನೀಡಿದರು.

ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯಲ್ಲಿ ಮೈಸೂರು ನಂಬರ್ ಒನ್ ಆಗಬೇಕು. ಇದು ನಿಮ್ಮಿಂದ ಸಾಧ್ಯವಿದೆ. ಸಾಧಿಸಿ ತೋರಿಸೋಣ ಎಂದು ಎಲ್ಲರ ಸಹಕಾರ ಕೋರಿದರು.

Tags: CMSiddaramaiahdasaradasarafestivalMysurunadahabba
Previous Post

ಇಂದೋರ್ ನಗರದಲ್ಲಿ ಸಾವಿರಾರು ಕೋಟಿ ಮೌಲ್ಯದ ರೈಲ್ವೆ ಯೋಜನೆ ಪ್ರಕಟಿಸಿದ ಅಶ್ವಿನಿ ವೈಷ್ಣವ್

Next Post

ಆರೋಗ್ಯಕರ ಭಾರತದ ಕುರಿತ ಆಂದೋಲನ : ಸಚಿನ್ ತೆಂಡೂಲ್ಕರ್

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಆರೋಗ್ಯಕರ ಭಾರತದ ಕುರಿತ ಆಂದೋಲನ : ಸಚಿನ್ ತೆಂಡೂಲ್ಕರ್

ಆರೋಗ್ಯಕರ ಭಾರತದ ಕುರಿತ ಆಂದೋಲನ : ಸಚಿನ್ ತೆಂಡೂಲ್ಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada