• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ..

ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಯ ಪರಿವರ್ತನೆ. ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ವಯೋ ಮಾನದೊಳಗಿದ್ದಾರೆ. ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾರೆ. ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿತಿ ಮತ್ತು ಆತ್ಮವಿಶ್ವಾಸದಿಂದ ಸಜ್ಜುಗೊಳಿಸಿದರೆ ಇದು ಅಸಾಧಾರಣ ಅವಕಾಶ. ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯಿಂದ ಸ್ಟಾರ್ಟ್ಅಪ್ ರಾಜಧಾನಿಯಾಗಿ ರೂಪಾಂತರಗೊಂಡಿರುವ ಬೆಂಗಳೂರು ನಗರ ಈಗ ಭಾರತದ ಕೌಶಲ್ಯ ರಾಜಧಾನಿಯಾಗಿರುವುದು ಹೆಮ್ಮೆಯ ವಿಷಯ ಎಂದರು.

ಕರ್ನಾಟಕ ಕೌಶಲ್ಯಾಭಿವೃದ್ಧಿ ನೀತಿ 2025-32
ಕಳೆದ ವರ್ಷದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಕರ್ನಾಟಕ ಕೌಶಲ್ಯಾಭಿವೃದ್ಧಿ ನೀತಿ 2025-32 ನ್ನು ಇಂದು ಬೆಂಗಳೂರು ಸ್ಕಿಲ್ ಸಮಿಟ್ 2025 ಕಾರ್ಯಕ್ರಮದ ಮೂಲಕ ಕಾರ್ಯರೂಪಕ್ಕೆ ತರಲಾಗುತ್ತಿದೆ. ಈ 7 ವರ್ಷದ ಕಾರ್ಯತಂತ್ರದ ನೀಲನಕ್ಷೆಗೆ 4,432 ಕೋಟಿ ರೂ. ಅನುದಾನದ ಬೆಂಬಲ ನೀಡಲಾಗಿದ್ದು , ಕರ್ನಾಟಕವನ್ನು ಕೌಶಲ್ಯಭರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸನ್ನದ್ಧರಾಗಿಸುವುದು ಹಾಗೂ ಕಾರ್ಮಿಕ ಶಕ್ತಿಯ ಜಾಗತಿಕ ಕೇಂದ್ರವನ್ನಾಗಿ ರೂಪಿಸುವುದು ನಮ್ಮ ಉದ್ದೇಶ. 2032 ಕ್ಕೆ ಸುಮಾರು 30 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ, ಐಟಿಐ ಗಳಲ್ಲಿ ಮಹಿಳೆಯರ ಪ್ರವೇಶವನ್ನು ಶೇ. 33 ಕ್ಕೆ ಹೆಚ್ಚಳ ಹಾಗೂ ಐಎಂಸಿಕೆ(International Migration Centre-Karnataka) ದ ಮೂಲಕ ಜಾಗತಿಕ ಉದ್ಯೋಗಾವಕಾಶಗಳ ವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದರು.

ಜಾಗತಿಕ ಮಟ್ಟಕ್ಕೆ ಕಾರ್ಮಿಕ ಶಕ್ತಿ
ಜಾಗತಿಕ ಮಟ್ಟಕ್ಕೆ ಕಾರ್ಮಿಕ ಶಕ್ತಿಯನ್ನು ಸಿದ್ಧಪಡಿಸಲು ಕರ್ನಾಟಕ ಸ್ಕಿಲ್ ಒಲಂಪಿಕ್ಸ್ ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಕೌಶಲ್ಯ ಸ್ಪರ್ಧೆಯಲ್ಲಿ 48 ಪದಕಗಳನ್ನು ಪಡೆದು ಭಾರತದಲ್ಲಿ ಕರ್ನಾಟಕ ಎರಡನೇ ಸ್ಥಾನವನ್ನು ಪಡೆದಿದೆ ಹಾಗೂ 4 ಅಂತರಾಷ್ಟ್ರೀಯ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಐಟಿಐಗಳು ಹಾಗೂ ಜಿಟಿಟಿಸಿಗಳ ಮೂಲಕ ಸುಮಾರು 33,212 ಯುವಕರಿಗೆ ತರಬೇತಿಯನ್ನು ನೀಡಲಾಗಿದ್ದು,. ಶಾಲಾ ಮಕ್ಕಳಿಗೆ ‘ನನ್ನ ವೃತ್ತಿ , ನನ್ನ ಆಯ್ಕೆ’ ಕಾರ್ಯಕ್ರಮದಡಿ, 35000 ಮಕ್ಕಳಿಗೆ ತರಬೇತಿ ನೀಡಲಾಗಿದೆ. ಈ ವರ್ಷ,ಯೋಜನೆಯನ್ನು 500 ಶಾಲೆಗಳಿಗೆ ವಿಸ್ತರಿಸಿ 2.3 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿಯಿದೆ ಎಂದರು.

ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ
ಬೆಂಗಳೂರು ಕೌಶಲ್ಯ ಶೃಂಗಸಭೆ ಕರ್ನಾಟಕದ ಕೌಶಲ್ಯ ಪಯಣದಲ್ಲಿ ಒಂದು ಮೈಲಿಗಲ್ಲು. ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವುದು ನಮ್ಮ ಗುರಿ. ಇಎಸ್ ಡಿಎಂಎಐ/ಎಂಎಲ್ ಏರೋಸ್ಪೇಸ್, ಹಸಿರು ಇಂಧನ, ಒಳಗೊಳ್ಳುವಿಕೆ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಕ್ಕೆ ತಯಾರಾಗಿರುವ ಕಾರ್ಮಿಕಪಡೆಯನ್ನು ಸಿದ್ದಮಾಡುವತ್ತ ಗಮನವನ್ನು ಕೇಂದ್ರೀಕೃತಗೊಳಿಸಿದೆ ಎಂದರು.

2032ರ ಹೊತ್ತಿಗೆ ಕರ್ನಾಟಕವನ್ನು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವಾಗಿಸಬೇಕು. 2032ರ ಹೊತ್ತಿಗೆ ಕರ್ನಾಟಕವನ್ನು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿಸುವುದು ನಮ್ಮ ಗುರಿ. ಈ ಗುರಿಯನ್ನು ಸಾಧಿಸಲು ನಮಗಿರುವ ಪ್ರಬಲ ಅಸ್ತ್ರವೆಂದರೆ ನಮ್ಮ ಜನ – ಕೌಶಲ್ಯಭರಿತ, ಭವಿಷ್ಯಕ್ಕೆ ತಯಾರಾದ ಹಾಗೂ ನಾವೀನ್ಯತೆವುಳ್ಳ ಕಾರ್ಮಿಕಶಕ್ತಿ ಎಂದರು.

ಕೌಶಲ್ಯಾಭಿವೃದ್ಧಿಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯ
ಕೌಶಲ್ಯಾಭಿವೃದ್ಧಿಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ದೇಶದಲ್ಲಿ ಪ್ರತ್ಯೇಕವಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ಪ್ರಾರಂಭಿಸಿದ ರಾಜ್ಯಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯ ಮೂಲಕ ಕೌಶಲ್ಯವನ್ನು ರಾಜ್ಯದ ಮೂಲೆ ಮೂಲೆಗೂ ಕೊಂಡೊಯ್ದಿದ್ದೇವೆ. 5 ಲಕ್ಷ ಯುವಜನರನ್ನು ತಲುಪುವ ಗುರಿ ಹೊಂದಿದ್ದರೂ ನಾವು ಅದಕ್ಕೂ ಹೆಚ್ಚು ಜನರನ್ನು ತಲುಪಿದ್ದೇವೆ. ಯುವಯುಗ ಯೋಜನೆಯಡಿ ಸುಧಾರಿತ ಡಿಜಿಟಲ್ ಕೌಶಲ್ಯವನ್ನು 1.10 ಲಕ್ಷ ಜನರಿಗೆ ಒದಗಿಸುವ ಮೂಲಕ ಕರ್ನಾಟಕ ಕೈಗಾರಿಕಾ ಕ್ರಾಂತಿಯನ್ನು 4 ನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಯ ಪರಿವರ್ತನೆ
ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ 34 ಮೆಗಾ ಉದ್ಯೋಗ ಮೇಳಗಳನ್ನು ಹಮ್ಮಿಕೊಂಡಿದ್ದು 1.43 ಲಕ್ಷ ಉದ್ಯೋಕಾಂಕ್ಷಿಗಳು ಭಾಗವಹಿಸಿದ್ದಾರೆ. 27, 123 ಜನರಿಗೆ ಉದ್ಯೋಗಾವಕಾಶಗಳು ಲಭಿಸಿವೆ. ಬದಲಾಗುತ್ತಿರುವ ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಯನ್ನು ಪರಿವರ್ತಿಸಲಾಗಿದೆ ಎಂದು ಅವರು ತಿಳಿಸಿದರು.

Tags: CM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dinner meetingcm siddaramaiah hosts dinnercm siddaramaiah latest newscm siddaramaiah livecm siddaramaiah newscm siddaramaiah speechcm siddaramaiah speech 2025cm siddaramaiah statementcm siddaramaiah statuscm siddaramaiah today newscm siddaramaiah videoDK Shivakumardk shivakumar cm siddaramaiahkarnataka cm siddaramaiahSiddaramaiah CMsiddaramaiah karnataka cmsiddaramaiah on cm change
Previous Post

ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ

Next Post

ಜಾಮೀನು ರದ್ದು ಮರುಪರಿಶೀಲನೆಗೆ ಪವಿತ್ರ ಗೌಡ ಅರ್ಜಿ

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
ಜಾಮೀನು ರದ್ದು ಮರುಪರಿಶೀಲನೆಗೆ ಪವಿತ್ರ ಗೌಡ ಅರ್ಜಿ

ಜಾಮೀನು ರದ್ದು ಮರುಪರಿಶೀಲನೆಗೆ ಪವಿತ್ರ ಗೌಡ ಅರ್ಜಿ

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!