• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಗುರಿ: ಸಚಿವ ಡಾ.ಕೆ.ಸುಧಾಕರ್

Any Mind by Any Mind
June 21, 2021
in ಕರ್ನಾಟಕ
0
ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಗುರಿ: ಸಚಿವ ಡಾ.ಕೆ.ಸುಧಾಕರ್
Share on WhatsAppShare on FacebookShare on Telegram

ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ADVERTISEMENT

ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಮಹಾ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ ನಂತರ ಮಾತನಾಡಿದ ಸಚಿವ ಸುಧಾಕರ್, ಅಂತಾರಾಷ್ಟ್ರೀಯ ಯೋಗ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆ ಅಭಿಯಾನ ನಡೆಸಲು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ ಸುಮಾರು 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. 18-44 ವರ್ಷದವರಿಗೆ ಲಸಿಕೆ ಹಾಗೂ ಎರಡನೇ ಡೋಸ್ ಪಡೆಯುವವರಿಗೂ ಲಸಿಕೆ ನೀಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.

15 ಲಕ್ಷಕ್ಕೂ ಅಧಿಕ ಕೋವಿಶೀಲ್ಡ್ ಹಾಗೂ 6-7 ಲಕ್ಷ ಕೋವ್ಯಾಕ್ಸಿನ್ ಲಸಿಕೆ ರಾಜ್ಯದಲ್ಲಿ ಸಂಗ್ರಹವಿದೆ. 1.86 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ 13 ಸಾವಿರ ಲಸಿಕಾ ಕೇಂದ್ರಗಳಿವೆ. ಒಂದು ಕೇಂದ್ರದಲ್ಲಿ 70-80 ಜನರಿಗೆ ಲಸಿಕೆ ನೀಡಿದರೂ ನಾವು ಗುರಿ ಮುಟ್ಟಲು ಸಾಧ್ಯವಿದೆ. ಇದಕ್ಕೆ ಜನರ ಸಂಪೂರ್ಣ ಸಹಕಾರ ಬೇಕಿದೆ. ಸ್ಪುಟ್ನಿಕ್ ಲಸಿಕೆ ನೀಡಲು ಅನುಮತಿ ಇದ್ದು, ಈ ಲಸಿಕೆಯ ಲಭ್ಯತೆ ಬಗ್ಗೆ ನೋಡಬೇಕಿದೆ ಎಂದರು.

ಕೋವಿಡ್ ಲಸಿಕೆ ಬಗ್ಗೆ ರಾಜ್ಯದ ಜನರಿಗೆ ಹೆಚ್ಚು ಜಾಗೃತಿ ಇದೆ. ಆರಂಭಿಕ ಹಂತದಲ್ಲಿ ಕೆಲ ಪಕ್ಷಗಳು ಲಸಿಕೆ ಬಗ್ಗೆ ಜನರ ಮನಸ್ಸಿನಲ್ಲಿ ಅಂಜಿಕೆ ಉಂಟುಮಾಡಿದ್ದವು. ಆದರೆ ಕ್ರಮೇಣ ಜನರಿಗೆ ನಂಬಿಕೆ ಬಂದಿದೆ. ಲಸಿಕೆಯೊಂದೇ ಕೊರೊನಾ ನಿವಾರಣೆಗೆ ಸೂಕ್ತ ಪರಿಹಾರ ಎಂಬುದು ಅರಿವಾಗಿದೆ ಎಂದರು.

ಕೋವಿಡ್ ಸಂಬಂಧಿ ಅಂಕಿ ಅಂಶ ನೀಡುವಲ್ಲಿ ರಾಜ್ಯ ಮಾದರಿಯಾಗಿದೆ ಎಂದು ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ನಮ್ಮ ಸರ್ಕಾರ ಯಾವುದೇ ಮಾಹಿತಿ ಮುಚ್ಚಿಡುತ್ತಿಲ್ಲ. ಕಪ್ಪು ಶಿಲೀಂಧ್ರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಬಿಡುಗಡೆಗೆ ಹೊಸ ಮಾರ್ಗಸೂಚಿಯನ್ನೂ ತರಲಾಗಿದೆ ಎಂದರು.
ಈ ವರ್ಷ ‘ಬಿ ವಿತ್ ಯೋಗ’, ‘ಯೋಗ ಫಾರ್ ವೆಲ್ ನೆಸ್’ ಎಂಬ ಘೋಷವಾಕ್ಯವಿದೆ. ದೊಡ್ಡ ಸಮಾರಂಭ ಇಟ್ಟುಕೊಳ್ಳದೆ ಕೋವಿಡ್ ಮಾರ್ಗಸೂಚಿ ಪಾಲಿಸಿ ಯೋಗ ದಿನ ಆಚರಿಸಲಾಗುತ್ತಿದೆ. ಯೋಗ ಕೇವಲ ದೈಹಿಕ ಮಾತ್ರವಲ್ಲದೆ, ಮಾನಸಿಕ, ಸಾಮಾಜಿಕ ಆರೋಗ್ಯಕ್ಕೆ ಅಗತ್ಯ. ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಇದನ್ನು ಪ್ರಸ್ತಾಪ ಮಾಡಿದ್ದು, ನಂತರ ಇಡೀ ಜಗತ್ತು ಯೋಗ ದಿನ ಆಚರಿಸುತ್ತಿದೆ ಎಂದರು.

ನಮ್ಮ ದೇಹ ರಥದಂತೆ ಎಂದು ಭಗವದ್ಗೀತೆಯಲ್ಲಿ ಹೇಳಲಾಗಿದೆ. ರಥದ ಕುದುರೆ ಇಂದ್ರಿಯ, ಸಾರಥಿ ಮನಸ್ಸು ಎನ್ನಲಾಗಿದೆ. ಮನಸ್ಸು ಸರಿ ಇದ್ದರೆ ಕುದುರೆಗಳು ಸರಿಯಾಗಿ ಓಡುತ್ತವೆ. ಇದೆಲ್ಲ ಸಾಧ್ಯವಾಗಲು ಯೋಗ ಮಾಡಬೇಕು. ಶ್ವಾಸಕೋಶಕ್ಕೆ ಉತ್ತಮ ವ್ಯಾಯಾಮವಾದ ಪ್ರಾಣಾಯಾಮ, ಧ್ಯಾನ ಮಾಡಬೇಕು. ಇದು ಕೇವಲ ಚಿಕಿತ್ಸೆ ಅಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಧಾನವಾಗಿದೆ ಎಂದರು.

Previous Post

ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಕಮಲದ ಆಕಾರ: ವಿನ್ಯಾಸ ಬದಲಿಸುವಂತೆ ಕಾಂಗ್ರೆಸ್ ಆಗ್ರಹ‌

Next Post

ಪ್ರತಿಪಕ್ಷ ಕಾಂಗ್ರೆಸ್ ಹೊಣಗೇಡಿತನ ಬಯಲು ಮಾಡಿದ ಸಿಎಂ ಅಭ್ಯರ್ಥಿ ಚರ್ಚೆ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಪ್ರತಿಪಕ್ಷ ಕಾಂಗ್ರೆಸ್ ಹೊಣಗೇಡಿತನ ಬಯಲು ಮಾಡಿದ ಸಿಎಂ ಅಭ್ಯರ್ಥಿ ಚರ್ಚೆ

ಪ್ರತಿಪಕ್ಷ ಕಾಂಗ್ರೆಸ್ ಹೊಣಗೇಡಿತನ ಬಯಲು ಮಾಡಿದ ಸಿಎಂ ಅಭ್ಯರ್ಥಿ ಚರ್ಚೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada