ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್ ಮತಿ ಎಕ್ಸ್‌ಪ್ರೆಸ್ ರೈಲು- ಗೂಡ್ಸ್ ರೈಲು ನಡುವೆ ನಿನ್ನೆ ಸಂಜೆ ಸಂಭವಿಸಿದ ಅಪಘಾತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
एक हवाई जहाज का हादसा होते-होते बचा तब तक तमिलनाडु में एक ट्रेन हादसा हो गया जिसमें बागमती एक्सप्रेस एक मालगाड़ी से टकरा गई तस्वीर बहुत भयावह है भगवान से विनती है सभी को सुरक्षितरखें#TrainAccident #Trichy #AirIndia pic.twitter.com/opKHPfb0gf
— Pankaj Rajbhar (@Pankaja2y) October 11, 2024
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಈ ಅವಘಡ ಒಡಿಶಾದ ರೈಲು ದುರಂತವನ್ನು ನೆನಪಿಸುವಂತಿದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
ಹಲವು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉನ್ನತ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.
ರೈಲು ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ರೈಲುಗಳ ನಡುವಿನ ಡಿಕ್ಕಿ ಬಗ್ಗೆ ಮಾಹಿತಿ ಬಂದ ತಕ್ಷಣ ಇಪ್ಪತ್ತೆರಡು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿ, ಪ್ರಯಾಣಿಕರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ತಾವು ತಲುಪಬೇಕಾದ ಸ್ಥಳ ತಲುಪಲು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಆದರೆ ಪದೇ ಪದೇ ಸಂಭವಿಸುವ ರೈಲು ಅಪಘಾತಗಳನ್ನು ತಡೆಗಟ್ಟಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.