ಬೆಂಗಳೂರು : ಬೇರೆ ಬೇರೆ ಪ್ರಕರಣಗಳಲ್ಲಿ 25 ಲಕ್ಷ ರೂ. ಪರಿಹಾರ ಕೊಡುವಂತೆ ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ 25 ಲಕ್ಷದವರೆಗೂ ಪರಿಹಾರ ಕೊಡಬೇಕು.
ಗಾಯಾಳುಗಳಿಗೆ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುರಂತಕ್ಕೆ ಕಾರಣರಾದ ಮಾಲೀಕರ, ಅಧಿಕಾರಿಗಳ ವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತ್ತಿಬೆಲೆಯಲ್ಲಿ 14 ಜನ ಪ್ರಾಣ ಕಳೆದುಕೊಂಡಿರುವುದು ದುರಂತ. ಮೃತರ ಕುಟುಂಬಸ್ಥರಿಗೆ ದು:ಖ ಭರಿಸುವ ಶಕ್ತಿಯನ್ನು ದೇವರು ಕೊಡಲಿ. ಇಲ್ಲಿ ಮಾಲೀಕರು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜನವಸತಿ ಪ್ರದೇಶದಲ್ಲಿ ಪಟಾಕಿಗಳ ಸಂಗ್ರಹಕ್ಕೆ ಅನುಮತಿ ಕೊಟ್ಟಿದ್ದೇಕೆ? ಮೃತರು ಕೂಲಿ ಕಾರ್ಮಿಕರು, ಇಂಥ ಅನಾಹುತ ಬೇರೆಲ್ಲೂ ಆಗದಂತೆ ತಡೆಯುವುದು ಸರ್ಕಾರದ ಕರ್ತವ್ಯ ಎಂದರು.