ಕೋವಿಡ್‌ ಲಾಕ್‌ಡೌನ್‌- ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ

[Sassy_Social_Share]

ಕರ್ನಾಟಕದಲ್ಲಿ ಕೋವಿಡ್‌  ಲಾಕ್‌ಡೌನ್‌ ಹಿನ್ನಲೆ,  ಬೆಳಗ್ಗೆ 6 ರಿಂದ ಬೆಳಗ್ಗೆ 10 ರವರೆಗೆ ದಿನಬಳಕೆ ವಸ್ತುಗಳನ್ನು ಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು.  ಇದೀಗ ದಿನಸಿ ಮತ್ತು  ಎಪಿಎಂಸಿ ಮಾರುಕಟ್ಟೆಯನ್ನು  ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ತೆರೆಯಲು ರಾಜ್ಯ ಸರ್ಕಾರ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ವಸ್ತುಗಳ ಖರೀದಿಯ ವೇಳೆ ಜನಸಂದಣಿ, ನೂಕು ನುಗ್ಗಲಾಟ ತಪ್ಪಿಸುವ ಸಲುವಾಗಿ ಈ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಜೊತೆಗೆ ತಳ್ಳುಗಾಡಿಯ ಮೂಲಕ ತರಕಾರಿ, ಹಣ್ಣು ಮಾರಾಟ ಮಾಡುವವರಿಗೆ, ಹಾಲಿನ ಅಂಗಡಿ, ಹಾಪ್‌ಕಾಮ್ಸ್‌ ಹಾಗು  ಹೆಚ್ಚು ಬೆಲೆಗೆ ಮಾರದೆ ಮಾರುಕಟ್ಟೆಯ ಬೆಲೆಗೆ ವ್ಯಾಪಾರ ಮಾಡುವವರಿಗೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ಎಲ್ಲಾ ರೀತಿಯ ಸಂತೆಗಳನ್ನು ನಿರ್ಬಂಧಿಸಲಾಗಿದೆ.

ಮೇ 2 ರಂದು  ಅನ್ವಯವಾಗುವಂತೆ ಈ  ಪರಿಷ್ಕೃತ ಆದೇಶವು ಜಾರಿಯಲ್ಲಿರುತ್ತದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್‌ ಆಯುಕ್ತರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಟಾಧಿಕಾರಿಗಳು, ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶದ ಪ್ರತಿಯಲ್ಲಿ ತಿಳಿಸಿದೆ.

Related posts

Latest posts

ನೆಹರೂ-ಗಾಂಧಿ ಕುಟುಂಬದಿಂದಲೇ ಭಾರತ ಇಂದು ಉಳಿದುಕೊಂಡಿದೆ: ಕೇಂದ್ರಕ್ಕೆ ಚಾಟಿಯೇಟು ನೀಡಿದ ಶಿವಸೇನೆ

COVID-19 ಅನ್ನು ನಿಭಾಯಿಸಲು ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದ್ದರೆ, ದೆಹಲಿಯಲ್ಲಿ ಬಹುಕೋಟಿ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸುವ ಕನಿಷ್ಟ ಸೌಜನ್ಯವನ್ನೂ ಮೋದಿ ಸರ್ಕಾರ ತೋರುತ್ತಿಲ್ಲ ಎಂದು ಕೇಂದ್ರ ಸರ್ಕಾರವನ್ನು...

ರಾಜ್ಯಗಳಿಗೆ ಆಕ್ಸಿಜನ್ ವಿತರಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ಸ್ಥಾಪಿಸಿದ ಸುಪ್ರೀಂ ಕೋರ್ಟ್.!

ದೇಶಾದ್ಯಂತ ಕರೋನ ಎರಡನೇ ಅಲೆ ವ್ಯಾಪಕವಾಗಿ ಹರಡಿರುವ ಮಧ್ಯೆ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಅದನ್ನು ಸಮರ್ಪಕವಾಗಿ ಎದುರಿಸಲು ಮತ್ತು ವೈಜ್ಞಾನಿಕವಾಗಿ ಮೆಡಿಕಲ್ ಆಕ್ಸಿಜನ್ಗಳನ್ನು ಹಂಚುವ ವಿಧಾನವನ್ನು ರೂಪಿಸಲು...

ಲಾಕ್ ಡೌನ್ ಘೋಷಿಸಿ ಬಡವರ್ಗದವರಿಗೆ ಯಾವುದೇ ಯೋಜನೆ ಘೋಷಿಸದ ರಾಜ್ಯ ಸರ್ಕಾರ

ಕೊರೋನ ಸಾಂಕ್ರಮಿಕವು ದಿನೇ ದಿನೇ ಉಲ್ಪಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳು ಲಾಕ್ ಡೌನ್ ಘೋಷಿಸಿವೆ. ಇದು ಅನಿವಾರ್ಯ ಕ್ರಮವೂ ಕೂಡ ಆಗಿದೆ. ಆದರೆ ಈ ಲಾಕ್ ಡೌನ್ ಘೋಷಣೆಯಿಂದ...