ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣ ವಿರೋಧಿಸಿದ ಪಿಐಎಲ್ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್ ವಿರೋಧಿಸಿ ಚನ್ನಮ್ಮ ವೃತ್ತದ ಬಳಿ ಬರುವ ಅಂಗಡಿ ಮಾಲೀಕರು, ಸಾರ್ವಜನಿಕರಿಂದ ಪಿಐಎಲ್ ಸಲ್ಲಿಸಿದ್ದರು. ಪಿಐಎಲ್ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚನ್ನಮ್ಮ ಸರ್ಕಲ್ ಮೇಲ್ಸೇತುವೆಗೆ ಹಲವಾರು ಜನರಿಂದ ಆಕ್ಷೇಪ ವ್ಯಕ್ತಪಡಿಸಿದ್ದರು. ಪರ್ಯಾಯ ರಸ್ತೆಗಳನ್ನು ನಿರ್ಮಿಸಿದರೆ ಸ್ಥಳೀಯ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಧಕ್ಕೆ ಉಂಟಾಗಲಿದೆ. ಹೀಗಾಗಿ ಮೇಲ್ಸೇತುವೆ ಕಾಮಗಾರಿ ಸ್ಥಗಿತಗೊಳಿಸಲು ನಿರ್ದೇಶಿಸುವಂತೆ ಕೋರ್ಟ್ ಮೊರೆ ಹೋಗಿದ್ದರು.
 
			
 
                                 
                                 
                                