• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮರ ಕಡಿಯಲು ಠೇವಣಿ ಇಟ್ಟಿದ್ದ ಹಣವನ್ನು ಭೂಮಾಲೀಕರಿಗೆ ಬಡ್ಡಿ ಸಹಿತ ಹಿಂತಿರುಗಿಸಲು ಆದೇಶಿಸಿದ ಹೈ ಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
January 5, 2025
in Top Story, ಇತರೆ / Others, ಕರ್ನಾಟಕ
0
ಮರ ಕಡಿಯಲು ಠೇವಣಿ ಇಟ್ಟಿದ್ದ ಹಣವನ್ನು ಭೂಮಾಲೀಕರಿಗೆ ಬಡ್ಡಿ ಸಹಿತ ಹಿಂತಿರುಗಿಸಲು ಆದೇಶಿಸಿದ ಹೈ ಕೋರ್ಟ್‌
Share on WhatsAppShare on FacebookShare on Telegram

ಬೆಂಗಳೂರು: ಕೊಡಗಿನ ಸಾಗು ಬಾಣೆ ಜಮೀನಿನಲ್ಲಿ ಬೆಳೆದಿದ್ದ ಮರಗಳನ್ನು ಕಡಿಯುವುದಕ್ಕಾಗಿ ತಪ್ಪಾಗಿ ಠೇವಣಿ ಇಟ್ಟಿದ್ದ ಹಣವನ್ನು ಬಡ್ಡಿ ಸಹಿತ ಭೂಮಾಲೀಕರಿಗೆ ಹಿಂದಿರುಗಿಸಲು ರಾಜ್ಯ ಹೈ ಕೋರ್ಟ್‌ ಅರಣ್ಯ ಇಲಾಖೆಗೆ ಆದೇಶಿಸಿದೆ.

ADVERTISEMENT

ತಮ್ಮ ತಂದೆ ಮಡಿಕೇರಿ ತಾಲ್ಲೂಕಿನ ದಿವಂಗತ ಎನ್. ಮಹಾಬಲೇಶ್ವರ ಭಟ್ ಅವರು ತಮ್ಮ ಸಾಗು ಬಾಣೆ ಜಮೀನಿನಲ್ಲಿ ಬೆಳೆದಿದ್ದ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾಗ ಅಧಿಕಾರಿಗಳು ಹಣವನ್ನು ಠೇವಣಿ ಇಡುವಂತೆ ಸೂಚಿಸಿದ್ದರು. ಆದರೆ ಪರಭಾರೆ ಆಗಿದ್ದ ಸಾಗು ಬಾಣೆ ಜಮೀನಿನಲ್ಲಿ ಬೆಳೆದಿದ್ದ ಮರಗಳ ಮೇಲೆ ಭೂಮಾಲೀಕರಿಗೆ ಪೂರ್ಣ ಹಕ್ಕು ಇದ್ದು , ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ಹಣ ಕಟ್ಟಿಸಿಕೊಂಡಿದ್ದಾರೆ ಎಂದು ತಪ್ಪಾಗಿ ಇಟ್ಟಿದ್ದ ಠೇವಣಿ ಹಿಂದಿರುಗಿಸಲು ಆದೇಶಿಸುವಂತೆ ಕೋರಿ ಪುತ್ರಿ ಗಾಯತ್ರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಸಾಗು ಬಾಣೆ ಜಮೀನು ಒಮ್ಮೆ ಪರಭಾರೆಗೊಂಡರೆ, ಆ ಜಮೀನಿನ ಮೇಲಾಗಲಿ ಅಥವಾ ಅದರಲ್ಲಿನ ಮರದ ಮೇಲಾಗಲಿ ಸರ್ಕಾರ ತನ್ನ ಯಾವುದೇ ಹಕ್ಕನ್ನು ಪ್ರತಿಪಾದಿಸಲಾಗದು. ಅಲ್ಲದೆ, ಈ ಜಮೀನಿನಲ್ಲಿರುವ ಮರಗಳನ್ನು ಕತ್ತರಿಸಲು ಸರ್ಕಾರಕ್ಕೆ ಯಾವುದೇ ಠೇವಣಿ ಇಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ತಪ್ಪಾಗಿ ಮುಂಗಡವಾಗಿ ಅರ್ಜಿದಾರರಿಂದ ಠೇವಣಿ ಇರಿಸಿಕೊಂಡಿದ್ದ 4.33 ಲಕ್ಷ ಮೊತ್ತಕ್ಕೆ ಶೇ.6ರಂತೆ ವಾಷಿಕ ಬಡ್ಡಿಯೊಂದಿಗೆ ಹಿಂದಿರುಗಿಸಬೇಕು ಎಂದು ಆದೇಶಿಸಿದೆ.

ಜತೆಗೆ, ಮರಗಳನ್ನು ಕತ್ತರಿಸಲು ಅರ್ಜಿದಾರರು ಅನುಮತಿ ಕೋರಿದಾಗಲೇ ಭೂಮಿಯ ದಾಖಲೆಗಳನ್ನು ಪರಿಶೀಲನೆ ಮಾಡಬೇಕಾದದ್ದು ಅರಣ್ಯಾಧಿಕಾರಿಗಳ ಕರ್ತವ್ಯವಾಗಿತ್ತು, ಈ ಪ್ರಕರಣದಲ್ಲಿ ಅರ್ಜಿದಾರರು ತಪ್ಪಾಗಿ ತಮ್ಮದು ಸಾಗು ಬಾಣೆ ಜಮೀನು ಎಂದು ತೋರಿಸಿದ್ದರು. ಇದರ ಅನುಕೂಲವನ್ನು ಸರ್ಕಾರ ಪಡೆಯಬಾರದು ಎಂದು ಪೀಠ ಸರ್ಕಾರಕ್ಕೆ ತಿಳಿಸಿದೆ.

ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಸರ್ವೇ ನಂಬರ್ 23ರಲ್ಲಿನ 25 ಎಕರೆ ಮತ್ತು ಸರ್ವೇ ನಂಬರ್ 29/7ರಲ್ಲಿನ 13.23 ಎಕರೆ ಜಮೀನನ್ನು ಎನ್. ಮಹಾಬಲೇಶ್ವರ ಭಟ್ ಖರೀದಿಸಿದ್ದರು. 1983ರಲ್ಲಿ ಈ ಜಮೀನಿನಲ್ಲಿರುವ 349 ಮರಗಳನ್ನು ಕತ್ತರಿಸಲು ಅನುಮತಿ ಕೋರಿ ಕೊಡಗು ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಅವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 1983ರ ಫೆಬ್ರುವರಿ 1ರಂದು ಅನುಮತಿ ದೊರೆತಿತ್ತು, ಅರ್ಜಿದಾರರು ಅರಣ್ಯಾಧಿಕಾರಿಗಳ ಷರತ್ತಿನಂತೆ ಮರಗಳನ್ನು ಕತ್ತರಿಸಿ, ತೆರವು ಕಾರ್ಯದ ಮೌಲ್ಯ 4.33 ಲಕ್ಷ ರೂಪಾಯಿ ಹಣವನ್ನು ಠೇವಣಿ ಇರಿಸಿದ್ದರು.

ಮರಗಳನ್ನು ಕತ್ತರಿಸಿ ತೆರವುಗೊಳಿಸಿದ ನಂತರ ಮಹಾಬಲೇಶ್ವರ ಭಟ್ ಅವರು ”ಈ ಜಮೀನು ಪರಭಾರೆಗೊಂಡ ಸಾಗುಬಾಣೆ ಜಮೀನಾಗಿದ್ದು, ಇದನ್ನು ವಿನಾ ಕಾರಣ ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಹೀಗಾಗಿ, ಈ ಜಮೀನು ನನಗೆ ಸೇರಿರುವ ಕಾರಣ ಮರಗಳನ್ನು ಕತ್ತರಿಸಲು ಹಣ ಠೇವಣಿ ಇರಿಸಬೇಕೆಂಬ ಷರತ್ತನ್ನು ವಿಧಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅವಕಾಶವಿಲ್ಲ. ಆದ್ದರಿಂದ, ಠೇವಣಿ ಹಣವನ್ನು ಹಿಂದಿರುಗಿಸಬೇಕು” ಎಂದು ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು.

ಆದರೆ, ಠೇವಣಿ ಮೊತ್ತವನ್ನು ಹಿಂದಿರುಗಿಸಲು ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿರಾಕರಿಸಿದ್ದು ಸಾಗು ಬಾಣೆ ಮರಗಳ ಮೇಲೆ ಅರಣ್ಯ ಇಲಾಖೆಯ ಹಕ್ಕು ಇದೆ ಎಂದು ಪ್ರತಿಪಾದಿಸಿದ್ದರು. ಇದನ್ನು ಪ್ರಶ್ನಿಸಿ ಭಟ್‌ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು ಪ್ರಕರಣ ವಿಚಾರಣೆ ಹಂತದಲ್ಲಿ ಮೃತ ಪಟ್ಟಿದ್ದರು. (ವರದಿ ;ಕೋವರ್‌ ಕೊಲ್ಲಿ ಇಂದ್ರೇಶ್‌ )

Tags: bengaluruBiligeri village of Madikeri Taluk.cut 349 treesForest Department to return the wrongly deposited money with interestHigh Court orderedMahabaleshwar BhatSagu Bane land in Kodagu.State High Courttrial stage of the case
Previous Post

ಮಧುಗಿರಿ :ಆರೋಪಿDYSP ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..!

Next Post

ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ಭ್ರಷ್ಟಾಚಾರ ಬಯಲಿಗೆಳೆದ ಛತ್ತೀಸ್‌ಗಡದ ಪತ್ರಕರ್ತನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!