ಬೆಂಗಳೂರು: ವಿವಾಹವಾಗಿದ್ದರೂ ಮತ್ತೊಬ್ಬರ ಜತೆ ಅಕ್ರಮ ಸಂಬಂಧವಿಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆ ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ಹೇಳಿದೆ.
ಚಿಕ್ಕಮಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಜೇಂದ್ರ ಬಾದಾಮಿಕರ್ ಅವರಿದ್ದ ಏಕಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.
ನ್ಯಾಯ ಪೀಠ, ” ಅರ್ಜಿದಾರರ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಹಾಗೂ ಪ್ರಾಮಾಣಿಕರಿಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕೆಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಜತೆಗೆ, ಪತಿ ಕಡೆಯಿಂದ ಯಾವುದೇ ನಿರೀಕ್ಷೆ ಮಾಡಬಾರದು,” ಎಂದು ಆದೇಶಿಸಿದೆ.