ತುಮಕೂರು (Tumakuru): ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G.Parmeshwar) ಅವರು, ಹೌದಾ, ಅರೆಸ್ಟ್ ಮಾಡಿದ್ರಾ? ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಮೂವರು ಆರೋಪಿಗಳ ಬಂಧನದ ಬಗ್ಗೆ ಪೊಲೀಸ್ ಪ್ರಕಟಣೆಯ ನೋಟ್ ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಇದು ಅಧಿಕೃತ ಅಂತಾ ಹೇಗೆ ನಂಬೋದು? ಅರೆಸ್ಟ್ ಆಗಿದ್ರೆ ಅದನ್ನ ಖಚಿತಪಡಿಸಿಕೊಂಡು ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇನೆ. ಬೆಂಗಳೂರಿಗೆ ಹೋಗ್ತೀನಿ ಈಗ ,ಆ ಬಳಿಕ ಕನ್ಫರ್ಮ್ ಮಾಡ್ತೀನಿ. ಅಂತಿಮವಾಗಿ ರಿಪೋರ್ಟ್ ಬಂದಿದ್ಯಾ? ಅದರ ಮೇಲೆ ಕ್ರಮ ತೆಗೆದುಕೊಂಡಿದ್ದಾರಾ ನೋಡ್ತೀನಿ ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು, FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ ? ಎಂದಿದ್ದಾರೆ.
#Karnataka #bengaluru #pro-Pak #arrest #gparmeshwar
 
			
 
                                 
                                 
                                