ದಿ ಕಾಶ್ಮೀರ್ ಫೈಲ್ಸ್ ಬಳಿಕ ರಾಜಕೀಯ ಬಣ್ಣ ಪಡೆದುಕೊಂಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಮತ್ತೊಂದು ಸಿನಿಮಾ ದಿ ಕೇರಳ ಸ್ಟೋರಿ ಸಿನಿಮಾವನ್ನು ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಾಗುವುದು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಯೋಗಿ ಆದಿತ್ಯನಾಥ್ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ಲೋಕಸಭಾ ಭವನದಲ್ಲಿ ಈ ದಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದ್ದು ಇಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಈ ಸಿನಿಮಾ ವೀಕ್ಷಿಸಲಿದ್ದಾರೆ ಎನ್ನಳಾಗಿದೆ.
ಲವ್ ಜಿಹಾದ್ನ ಕತೆ ಆಧರಿಸಿ ಈ ಸಿನಿಮಾವನ್ನು ಹೆಣೆಯಲಾಗಿದ್ದು ಲವ್ ಜಿಹಾದ್ಗೆ ಒಳಗಾದ ಹೆಣ್ಣು ಮಕ್ಕಳ ಭವಿಷ್ಯ ಹೇಗಿರುತ್ತೆ ಅನ್ನೋದನ್ನು ಈ ಸಿನಿಮಾದಲ್ಲಿ ಎಳೆ ಎಳೆಯಾಗಿ ತೋರಿಸಲಾಗಿದೆ.