• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು:ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಅಂಕಣ, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ.ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ADVERTISEMENT

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.

GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು.

CM Siddaramiah  :CM ಕುರ್ಚಿ ಮೇಲೆ ಕಣ್ಣಿಟ್ಟ DKಗೆ ಶಾಕ್ ಕೊಟ್ರಾ ಸಿದ್ದಣ್ಣ? ಈ ಮಾತು ಹೇಳಿದ್ಯಾಕೆ? #pratidhvani

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌.ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು.ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ:ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಭರವಸೆ ನೀಡಿದರು.‌

ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ:ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

Tags: Annabhagya schemes.Co-operative sector'sCongress PartyFarmers' labor should be rewardedfix the priceGrihajyotiGrilahakshmiNABARDShakti
Previous Post

ಶಿವಾಜಿ ಚಿತ್ರದಲ್ಲಿ ನಟಿಸೋದಾಗಿ ಘೋಷಿಸಿದ ರಿಷಬ್:‌ ಕನ್ನಡಿಗರಿಂದ ವಿರೋಧದ ಸುರಿಮಳೆ!

Next Post

ಕಾರ್ಪೊರೇಟ್‌ ಸಂಸ್ಥೆಗಳು ಐಟಿಐಗಳನ್ನು ದತ್ತು ತೆಗೆದುಕೊಳ್ಳಲಿ: ಶರಣ್ ಪ್ರಕಾಶ್ ಪಾಟೀಲ್ ಸಲಹೆ

Related Posts

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಇತರೆ / Others

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಎಂಬಾತನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 38...

Read moreDetails
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
Next Post

ಕಾರ್ಪೊರೇಟ್‌ ಸಂಸ್ಥೆಗಳು ಐಟಿಐಗಳನ್ನು ದತ್ತು ತೆಗೆದುಕೊಳ್ಳಲಿ: ಶರಣ್ ಪ್ರಕಾಶ್ ಪಾಟೀಲ್ ಸಲಹೆ

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada