• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನಾಯಕನಿಲ್ಲದ ಸರ್ಕಾರ ಅಪಾಯಕಾರಿ, ಬಿಜೆಪಿ ಅಧಿಕಾರ ಬಿಟ್ಟು ನಿರ್ಗಮಿಸಬೇಕು – ಹೆಚ್ ಡಿ ಕುಮಾರಸ್ವಾಮಿ

Any Mind by Any Mind
June 17, 2021
in ರಾಜಕೀಯ
0
ನಾಯಕನಿಲ್ಲದ ಸರ್ಕಾರ ಅಪಾಯಕಾರಿ, ಬಿಜೆಪಿ ಅಧಿಕಾರ ಬಿಟ್ಟು ನಿರ್ಗಮಿಸಬೇಕು – ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಸದು ಬಿಜೆಪಿಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಮುಖ್ಯಮಂತ್ರಿ ಆಕಾಂಕ್ಷಿಗಳು, ಯಡಿಯೂರಪ್ಪ ವಿರೋಧಿಗಳು, ಯಡಿಯೂರಪ್ಪ ಪರವಾಗಿರುವವರ ನಡುವಿನ ಸಂಘರ್ಷ ಇದೀಗ ಬಹಿರಂಗ ರಹಸ್ಯ ಆಗಿ ಉಳಿದಿದೆ.

ADVERTISEMENT


ಬಿಜೆಪಿಯಲ್ಲಿ ಯಡಿಯೂರಪ್ಪರಿಗೆ ಪರ್ಯಾಯವಾಗಿ ನಾಯಕರೇ ಇಲ್ಲವೇ ಎಂಬ ಹೇಳಿಕೆಗಳ ನಡುವೆ, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ, ಬಿಜೆಪಿಯೊಳಗೆ ನಾಯಕತ್ವವಿಲ್ಲದಿದ್ದರೆ, ಅಧಿಕಾರದಿಂದ ನಿರ್ಗಮಿಸುವಂತೆ ಆಗ್ರಹಿಸಿದ್ದಾರೆ.


ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ. “ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ…” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು ಎಂದು ಅವರು ಒತ್ತಾಯಿಸಿದ್ದಾರೆ.


ಈ ಕುರಿತು ಸರಣಿ ಟ್ವೀಟ್‌ ಮಾಡಿದ ಅವರು, ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ. ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು.

ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ
– ಕೂಡಲ ಸಂಗಮದೇವ

ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ.
1/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 17, 2021


ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ. ಕೋವಿಡ್, ಲಾಕ್ಡೌನ್ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು ಎಂದು ಅವರು ಹೇಳಿದ್ದಾರೆ.


ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು. ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು ಎಂದು ಅವರು ಹೇಳಿದ್ದಾರೆ..

Previous Post

ರಾಜ್ಯಪಾಲರು ಮಧ್ಯೆಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ ಒತ್ತಾಯ

Next Post

ತನಗೆ ನಿಯಂತ್ರಿಸಲಾಗದನ್ನು ಧ್ವಂಸಗೊಳಿಸಲು ನೋಡುತ್ತದೆ: ಟ್ವಿಟರ್‌ ವಿರುದ್ಧದ ಕೇಂದ್ರದ ನಡೆಗೆ ದೀದಿ ಟೀಕೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ತನಗೆ ನಿಯಂತ್ರಿಸಲಾಗದನ್ನು ಧ್ವಂಸಗೊಳಿಸಲು ನೋಡುತ್ತದೆ: ಟ್ವಿಟರ್‌ ವಿರುದ್ಧದ ಕೇಂದ್ರದ ನಡೆಗೆ ದೀದಿ ಟೀಕೆ

ತನಗೆ ನಿಯಂತ್ರಿಸಲಾಗದನ್ನು ಧ್ವಂಸಗೊಳಿಸಲು ನೋಡುತ್ತದೆ: ಟ್ವಿಟರ್‌ ವಿರುದ್ಧದ ಕೇಂದ್ರದ ನಡೆಗೆ ದೀದಿ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada