ಗದಗ: ಕಳೆದ ಹಲವು ದಿನಗಳಿಂದ ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದ ಚಿರತೆ ಸೆರೆಯಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಬೈರಾಪುರ ತಾಂಡಾದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಹಸುವಿನ ಮೇಲೆ ದಾಳಿ ಮಾಡಿದ್ದ ಚಿರತೆ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.
ಹೀಗಾಗಿ ಚಿರತೆ ಸೆರೆಹಿಡಿಯುವ ಸಲುವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಿಂದಾಗಿ ಇಂದು ಬೈರಾಪುರ ತಾಂಡಾದಲ್ಲಿ ಚಿರತೆ ಸೆರೆಯಾಗಿದ್ದು, ಇದರಿಂದಾಗಿ ಚಿರತೆಯ ಹಾವಳಿಯಿಂದ ಸಾಕಷ್ಟು ಆತಂಕಗೊಂಡಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ