ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಲಾಕ್‌ಡೌನ್ ಅವಧಿಯನ್ನು ಇನ್ನೂ ಒಂದು ತಿಂಗಳು ಲಾಕ್ಡೌನ್ ವಿಸ್ತರಣೆ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮೇ. 24 ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ, ಇಲ್ಲದಿದ್ದರೆ ದೊಡ್ಡ ಅನಾಹುತ ಆಗಲಿದೆ ಎಂದಿದ್ದಾರೆ. ಜೊತೆಗೆ ಸರ್ಕಾರದಿಂದ ಕೂಲಿ ಕಾರ್ಮಿಕರಿಕೆ ,ಶ್ರಮಿಕರು,ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕರೋನಾ ಸೋಂಕು ಕಡಿಮೆಯಾಗಿಲ್ಲ. ಆದರೆ ಕೋವಿಡ್ ಟೆಸ್ಟ್ ಸಂಖ್ಯೆಯಲ್ಲಿ ಕಡಿಮೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು ನೋವುಗಳು ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ತಾತ್ಕಾಲಿಕವಾಗಿ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಎಡವಟ್ಟು ಆಗುತ್ತದೆ. ಮಂತ್ರಿಗಳು ವಾಸ್ತವಿಕ ಹೇಳಿಕೆ ಕೊಡುತ್ತಿಲ್ಲ ಕೇವಲ ಲಘುವಾಗಿ ಹೇಳಿಕೆಯನ್ನು ಕೊಡುತ್ತಿದ್ದಾರೆ. ಕೇವಲ ಸಭೆ ಮಾಡಿದರೆ ಯಾವುದೇ ಪ್ರಯೋಜನ ಇಲ್ಲ, ಈಗಾಗಲೆ ಕೋವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಹೆಚ್‌ಡಿ ಕುಮಾರಸ್ವಾಮಿ ಸಲಹೆ ಕೊಟ್ಟಿದ್ದಾರೆ.











