ಇನ್ನೂ ಒಂದು ತಿಂಗಳು‌ ಲಾಕ್ಡೌನ್ ವಿಸ್ತರಣೆ ಮಾಡಬೇಕು –ಹೆಚ್‌ಡಿಕೆ

ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಲಾಕ್‌ಡೌನ್‌ ಅವಧಿಯನ್ನು ಇನ್ನೂ ಒಂದು ತಿಂಗಳು‌ ಲಾಕ್ಡೌನ್ ವಿಸ್ತರಣೆ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.  ಮೇ. 24 ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ, ಇಲ್ಲದಿದ್ದರೆ ದೊಡ್ಡ ಅನಾಹುತ ಆಗಲಿದೆ ಎಂದಿದ್ದಾರೆ. ಜೊತೆಗೆ ಸರ್ಕಾರದಿಂದ ಕೂಲಿ ಕಾರ್ಮಿಕರಿಕೆ ,ಶ್ರಮಿಕರು,ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ  ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕರೋನಾ ಸೋಂಕು ಕಡಿಮೆಯಾಗಿಲ್ಲ. ಆದರೆ ಕೋವಿಡ್ ಟೆಸ್ಟ್ ಸಂಖ್ಯೆಯಲ್ಲಿ ಕಡಿಮೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು ನೋವುಗಳು ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ತಾತ್ಕಾಲಿಕವಾಗಿ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಎಡವಟ್ಟು ಆಗುತ್ತದೆ. ಮಂತ್ರಿಗಳು ವಾಸ್ತವಿಕ ಹೇಳಿಕೆ ಕೊಡುತ್ತಿಲ್ಲ ಕೇವಲ ಲಘುವಾಗಿ ಹೇಳಿಕೆಯನ್ನು ಕೊಡುತ್ತಿದ್ದಾರೆ. ಕೇವಲ ಸಭೆ ಮಾಡಿದರೆ ಯಾವುದೇ ಪ್ರಯೋಜನ ಇಲ್ಲ, ಈಗಾಗಲೆ ಕೋವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಹೆಚ್‌ಡಿ ಕುಮಾರಸ್ವಾಮಿ ಸಲಹೆ ಕೊಟ್ಟಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...