ಯಾದಗಿರಿ : ಅಡುಗೆ ಅನಿಲದ ಸಿಲಿಂಡರ್ಗಳನ್ನು ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ನೂರಕ್ಕೂ ಅಧಿಕ ಸಿಲಿಂಡರ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆಯು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಳಿಯ ಹುನಗುಂದ – ಸುರಪುರ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕನಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಿಲಿಂಡರ್ಳು ಕೆಂಭಾವಿ ಪಟ್ಟಣದ ಶ್ರೀನಿಧಿ ಗ್ಯಾಸ್ ಏಜೆನ್ಸಿಗೆ ಸೇರಿವೆ ಎನ್ನಲಾಗಿದೆ.
ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.