• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು : ಸಿದ್ದರಾಮಯ್ಯ ಆಗ್ರಹ

Any Mind by Any Mind
March 15, 2023
in ಇದೀಗ, ಕರ್ನಾಟಕ, ರಾಜಕೀಯ
0
ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರ  ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು : ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಬೆಂಗಳೂರು:ಮಾ.15: ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ ಗಡಿಯೊಳಗೆ ಇರುವ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಆರೋಗ್ಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಹೊರಟಿರುವುದಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಹಂಚಿಕೆಗೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮ. 1966ರಲ್ಲಿ ಅವರು ವರದಿ ಸಲ್ಲಿಸಿದ್ರು, ಅವತ್ತಿನಿಂದ ನಾವು ಒಪ್ಪಿಕೊಂಡಿದ್ದೇವೆ, ಮಹಾರಾಷ್ಟ್ರದವರು ತಕರಾರು ಮಾಡುತ್ತಲೇ ಇದ್ದಾರೆ. ಕೇಂದ್ರ ಸರ್ಕಾರ ಮಹಾಜನ್‌ ಆಯೋಗವನ್ನು ರಚನೆ ಮಾಡಿತ್ತು, ಮಹಾಜನ್‌ ಅವರು ಮಹಾರಾಷ್ಟ್ರದವರೇ. ನಾವು ಈ ವರದಿಯನ್ನು ಗೌರವಿಸಬೇಕು ಎಂದು ಒಪ್ಪಿಕೊಂಡಿದ್ದೇವೆ. ಮಹಾರಾಷ್ಟ್ರದವರು ಈಗ 865 ಹಳ್ಳಿಗಳು ತಮ್ಮವು ಎಂದು ಹೇಳುತ್ತಿದ್ದಾರೆ. ಆರೋಗ್ಯ ವಿಮಾ ಯೋಜನೆಯನ್ನು 865 ಹಳ್ಳಿಗಳಿಗೆ ಜಾರಿ ಮಾಡಬೇಕು ಎಂದು ಕಾರ್ಯಕ್ರಮವನ್ನು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಆಡಳಿತ ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಸುಮ್ಮನಿದೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಕೂಡ ಮಾತನಾಡುತ್ತಿಲ್ಲ, ಇಲ್ಲಿ ಸರ್ಕಾರ ಸತ್ತು ಹೋಗಿದೆಯಾ ಎಂಬ ಅನುಮಾನ ಬರುತ್ತಿದೆ.

ಮಹಾರಾಷ್ಟ್ರ ಸರ್ಕಾರ ನಮ್ಮ ರಾಜ್ಯದ ಗಡಿಯೊಳಗೆ ಇರುವ ಹಳ್ಳಿಗಳಿಗೆ ಬಂದು ಆರೋಗ್ಯ ವಿಮಾ ಸೌಲಭ್ಯವನ್ನು ನೀಡುತ್ತೇವೆ ಎಂದರೂ ಕ್ರಮ ಕೈಗೊಳ್ಳಬೇಕಾದರೂ ಸುಮ್ಮನಿದ್ದಾರೆ ಎಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸತ್ತು ಹೋಗಿವೆಯಾ ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಪ್ರಧಾನಿಗಳು ಕೂಡ ಅವರಿಗೆ ಬುದ್ದಿ ಹೇಳಿಲ್ಲ. ಇದು ನಮ್ಮ ಸಾರ್ವಭೌಮತೆಗೆ ಸವಾಲು. ಏಕೀಕರಣದ ನಂತರ ಭಾಷಾವಾರು ಪ್ರಾಂತ್ಯಗಳು ರಚನೆಯಾದ ಮೇಲೆ ನಮ್ಮ ರಾಜ್ಯದ ಒಂದಿಂಚನ್ನು ನಾವು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು. ಭಾಷೆ, ಸಂಸ್ಕೃತಿ, ನೆಲ, ಜಲ ನಮ್ಮ ಆರೂವರೆ ಕೋಟಿ ಜನರ ಹಕ್ಕು ಮತ್ತು ಸಾರ್ವಭೌಮತೆಯ ಸಂಕೇತ. ಇದಕ್ಕೆ ಧಕ್ಕೆ ಬಂದಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಾಯಿ ಮುಚ್ಚಿಕೊಂಡು ಕೂರಬಾರದು. ಇಂಥ ಘಟನೆಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಆಗ ನಾವು ಒಕ್ಕೂಟ ವ್ಯವಸ್ಥೆಯಡಿ ಮುಂದುವರೆಯುವ ಬಗ್ಗೆ ಕೆಟ್ಟ ಯೋಚನೆಗಳು ಆರಂಭವಾಗುತ್ತದೆ.

ಮಹಾರಾಷ್ಟ್ರದ ಕನ್ನಡಿಗರು ಕರ್ನಾಟಕ ಸೇರುವ ಹೇಳಿಕೆ ನೀಡಿದ್ದರು, ಹಾಗಂತ ಅದಕ್ಕೆ ನಾವು ಮಧ್ಯಪ್ರವೇಶ ಮಾಡಲು ಆಗುತ್ತಾ? ಅವರ ಸಮಸ್ಯೆಗಳಿಗೆ ಅಲ್ಲಿನ ಸರ್ಕಾರ ಪರಿಹಾರ ನೀಡಿಲ್ಲ ಎಂದು ನಾವು ಅವರಿಗೆ ಕಾರ್ಯಕ್ರಮಗಳನ್ನು ನೀಡಲು ಆಗುತ್ತದಾ? ನಾವು ಅಲ್ಲಿನ ಕನ್ನಡಿಗರಿಗೆ ಸವಲತ್ತು ನೀಡಲು ಹೋದರೆ ಅದು ಒಕ್ಕೂಟ ವ್ಯವಸ್ಥೆಯ ಒಳ್ಳೆಯ ಲಕ್ಷಣವಾಗಲ್ಲ. ಅದೇ ರೀತಿ ಅವರು ಕೂಡ ಇಲ್ಲಿನವರಿಗೆ ಕಾರ್ಯಕ್ರಮ ನೀಡುವುದು ಒಳ್ಳೆಯ ಬೆಳವಣಿಗೆ ಅಲ್ಲ.

ಕರ್ನಾಟಕದ ಗಡಿಯೊಳಗೆ ಇರುವ ಜನರಿಗೆ ಕಾರ್ಯಕ್ರಮ ನೀಡುತ್ತೇವೆ ಎಂಬ ಹೇಳಿಕೆ ನೀಡಿರುವವರು ಏಕನಾಥ್‌ ಶಿಂಧೆ ಸರ್ಕಾರದಲ್ಲಿರುವ ಹಿರಿಯ ನಾಯಕರು. ನಾವು ಶಾಂತವಾಗಿದ್ದೀವಿ ಎಂದರೆ ನಮ್ಮ ನೆಲ, ಜಲದ ವಿಚಾರದಲ್ಲಿ ಮಾತನಾಡಲ್ಲ ಎಂದರ್ಥವಲ್ಲ, ನಮ್ಮನ್ನು ಪದೇ ಪದೇ ಕೆಣಕಲು ನೋಡುತ್ತಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ.

ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ, ಮಹಾರಾಷ್ಟ್ರದ ಏಕನಾಥ್‌ ಶಿಂಧೆ ಸರ್ಕಾರವನ್ನು ವಜಾ ಮಾಡಬೇಕು. ಈ ಘಟನೆ ಒಕ್ಕೂಟ ವ್ಯವಸ್ಥೆಗೆ ಒಂದು ಬೆದರಿಕೆ. ನಮ್ಮ ಮುಖ್ಯಮಂತ್ರಿಗಳು ರಾಜ್ಯದ ಹಿತಾಸಕ್ತಿ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ವಿಫಲವಾಗಿದ್ದಾರೆ, ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ, ಅವರು ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು..

Tags: BJPBJP GovernmentcmbommaiCongress PartycongressvsbjpKarnataka Governmentkarnatakaborder newskarnatakanewslatest newslatestnewsMaharastra PoliticsModiPMModipolitical Leaderssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

Next Post

ಉದ್ಯೋಗಕ್ಕಾಗಿ ಭೂ ಹಗರಣ : ಲಾಲೂ ಪ್ರಸಾದ್​ ಯಾದವ್​, ರಾಬ್ರಿ ದೇವಿ ಹಾಗೂ ಮಿಸಾ ಭಾರತಿಗೆ ಜಾಮೀನು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಉದ್ಯೋಗಕ್ಕಾಗಿ ಭೂ ಹಗರಣ : ಲಾಲೂ ಪ್ರಸಾದ್​ ಯಾದವ್​, ರಾಬ್ರಿ ದೇವಿ ಹಾಗೂ ಮಿಸಾ ಭಾರತಿಗೆ ಜಾಮೀನು

ಉದ್ಯೋಗಕ್ಕಾಗಿ ಭೂ ಹಗರಣ : ಲಾಲೂ ಪ್ರಸಾದ್​ ಯಾದವ್​, ರಾಬ್ರಿ ದೇವಿ ಹಾಗೂ ಮಿಸಾ ಭಾರತಿಗೆ ಜಾಮೀನು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada