ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗೆ (Micro finance) ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿತ್ತು. ಆದ್ರೆ ಈ ವಿಚಾರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ (Governor) ನಡುವೆ ಜಟಾಪಟಿ ಶುರುವಾಗಿದೆ.ಮೊನ್ನೆ ಸುಗ್ರೀವಾಜ್ಞೆ ವಾಪಸ್ ಕಳಿಸಿದ ಬೆನ್ನಲ್ಲೆ ಕಾಂಗ್ರೆಸ್ (Congress) ಆಕ್ರೋಶ ವ್ಯಕ್ತಪಡಿಸಿದೆ.

ಇದೀಗ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ವ್ಯಕ್ತಪಡಿಸಿರುವ ಎಲ್ಲ ಆಕ್ಷೇಪಣೆಗಳಿಗೂ ಕಾನೂನು ಇಲಾಖೆ ಸೂಕ್ತ ಸ್ಪಷ್ಟಿಕರಣಗಳನ್ನ ಸಿದ್ಧಪಡಿಸಿದೆ. ಸ್ಪಷ್ಟಿಕರಣ ಸಹಿತ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ಇವತ್ತು ಮತ್ತೆ ರಾಜ್ಯಪಾಲರಿಗೆ ಕಳಿಸಲಾಗ್ತಿದೆ.
ಸದ್ಯ ಕಾನೂನು ಇಲಾಖೆ ಸಿದ್ಧಪಡಿಸಿರುವ ಸ್ಪಷ್ಟಿಕರಣಗಳನ್ನು ಸಿಎಂ ಅವಗಾಹನೆಗೆ ಕಳಿಸಲಾಗಿದೆ. ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳಿಸಲಾಗುತ್ತದೆ. ಇದು ವ್ಯಕ್ತಿಯ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ. ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ. ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ ಅಂತ ಸ್ಪಷ್ಟನೆ ಕೊಡಲಾಗ್ತಿದೆ.