ಪ್ರಣಂ ದೇವರಾಜ್ (Pranam Devaraj) ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಶ್ರೀಕಾಂತ್ ಹುಣಸೂರು (Srikanth Hunasur) ನಿರ್ದೇಶನ .

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” (S/O Muttanna) ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರ್ ಸಂಗೀತ (Sachin Basrur Musiq) ನೀಡಿರುವ ಈ ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂಬ ಕಾತುರ ಅಭಿಮಾನಿಗಳಲ್ಲಿತ್ತು.

ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ. “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಚಿತ್ರವನ್ನು ಅಮೆರಿಕಾ ಹಾಗೂ ದುಬೈನಲ್ಲಿ ಬಿಡುಗಡೆ ಮಾಡುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ.

ಅಪ್ಪ – ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ತಂದೆ – ಮಗನಾಗಿ ಅಭಿನಯಿಸದ್ದಾರೆ. ಅಪ್ಪ – ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಲಿದೆ.
ಪುರಾತನ ಫಿಲಂಸ್ (Puratana Films) ನಿರ್ಮಾಣ ಮಾಡಿರುತ್ತಾರೆ ಇವರಿಗೆ ಎಸ್ ಅರ್ ಕೆ ಫಿಲಂಸ್ (SRK Films) ಸಾಥ್ ನೀಡಿದೆ.
ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ (Khushi Ravi) ಅಭಿನಯಿಸಿದ್ದಾರೆ. ರಂಗಾಯಣ ರಘು (Rangayana Raghu) ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್(Suchendra Prasad), ಗಿರೀಶ್ ಶಿವಣ್ಣ(Girish Shivanna), ತಬಲ ನಾಣಿ(Tabala Nani), ಶ್ರೀನಿವಾಸ್ ಪ್ರಭು(Srinivas Prabhu), ಸುಧಾ ಬೆಳವಾಡಿ(Sudha Belavadi), ಅರುಣ್ ಚಕ್ರವರ್ತಿ(Arun Chakravarthi) ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್(Yogaraj Bhat), ಜಯಂತ್ ಕಾಯ್ಕಿಣಿ(Jayanth Kaykani), ಪ್ರಮೋದ್ ಮರವಂತೆ (Pramod Maravante) ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.