• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “45” ಚಿತ್ರ .

ಪ್ರತಿಧ್ವನಿ by ಪ್ರತಿಧ್ವನಿ
January 15, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ವಿಭಿನ್ನ ವಿಡಿಯೋ ಮೂಲಕ ಚಿತ್ರದ ಬಿಡುಗಡೆ ದಿನಾಂಕ ತಿಳಿಸಿದ ಚಿತ್ರತಂಡ .

ADVERTISEMENT

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15, ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ “45” ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D ತಂತ್ರಜ್ಞಾನದಲ್ಲಿ ವಿಭಿನ್ನ ವಿಡಿಯೋ ಮಾಡಿಸಿದ್ದಾರೆ. ತಾಂತ್ರಿಕ ಶ್ರೀಮಂತಿಕೆಯಿಂದ ಕೂಡಿರುವ ಈ ವಿಡಿಯೋದಲ್ಲಿ ಸ್ಕೂಟರ್ ಏರಿ ಬರುವ ಶಿವರಾಜಕುಮಾರ್ ಅವರು , ಆಕ್ರಮಣಕಾರರನ್ನು ಶೂಟ್ ಮಾಡುತ್ತಾ ಬರುತ್ತಿರುತ್ತಾರೆ. ಕೊನೆಗೆ ಒಂದು ಗುಡ್ಡವನ್ನು ಶೂಟ್ ಮಾಡಿದಾಗ ಅದು ಸಿಡಿದು, ಬಂಡೆಯಲ್ಲಿ ಮೂರು ನಾಯಕ ನಟರ ಭಾವಚಿತ್ರ ಮೂಡಿ, ಬಿಡುಗಡೆಯ ದಿನಾಂಕ ಘೋಷಣೆಯಾಗುತ್ತದೆ. ಕನ್ನಡದಲ್ಲಿ ಈ ತರಹದ ಪ್ರಯತ್ನ ತೀರ ಅಪರೂಪ ಎನ್ನಬಹುದು. ಸ್ಕೂಟರ್ ಓಡಿಸುತ್ತಾ ಬರುವ ಶಿವಣ್ಣ ಅವರ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ವಿಡಿಯೋ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

NagaraholeTiger Reserve: ಸಫಾರಿಯಲ್ಲಿ ಹುಲಿಗಳ ದರ್ಶನ.. ಪ್ರವಾಸಿಗರು ಫುಲ್ ಖುಷ್..! #Tiger, #Safari

ಚಿತ್ರದ ಡೇಟ್ ಅನೌನ್ಸ್ ಮಾಡಲು ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಸಚಿವರಾದ ರಾಮಲಿಂಗ ರೆಡ್ಡಿ, ಕೆ.ವಿ.ಎನ್ ಸಂಸ್ಥೆಯ ವೆಂಕಟ್ ನಾರಾಯಣ್, ಮಾಜಿ ಶಾಸಕರಾದ ರಾಮಚಂದ್ರೇಗೌಡ, ಡಾ. ಸಂಜಯ್ ಗೌಡ, ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಛಾಬ್ರಿಯಾ, ಆನಂದ್ ಛಾಬ್ರಿಯಾ, ಕೆ.ಮಂಜು, ಇಂದ್ರಜಿತ್ ಲಂಕೇಶ್, ಕಿರಣ್ ಭರ್ತೂರ್, ಶ್ರೇಯಸ್ ಮಂಜು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ನಿರ್ಮಾಪಕ ರಮೇಶ್ ರೆಡ್ಡಿ ಅವರ ಮಗ ಸೂರಜ್ ಅವರೆ ಚಿತ್ರದ ಬಿಡುಗಡೆ ದಿನಾಂಕ ತಿಳಿಸುವ ವಿಡಿಯೋ ಬಿಡುಗಡೆ ಮಾಡಿದರು. ಸೂರಜ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ವಿಶೇಷ. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ಮಾಪಕ ಎಂ.ರಮೇಶ್ ರೆಡ್ಡಿ ಮಾತನಾಡಿ, ಚಿತ್ರದಲ್ಲಿ ಕಂಟೆಂಟ್ ಹೇಗೆ ಇದೆ ಎನ್ನುವುದು ಮುಖ್ಯ. ಚಿತ್ರ 1000 ಕೋಟಿ ಮಾಡುತ್ತೋ, 100 ಕೋಟಿ ರೂಪಾಯಿ ಗಳಿಸುತ್ತೋ ಅಥವಾ 50 ಕೋಟಿ ಮಾಡುತ್ತೋ ದೇವರಿಗೆ ಗೊತ್ತು. ಆದರೆ ಚಿತ್ರ ಮೂಡಿ ಬಂದಿರುವ ಬಗೆ ಹಾಗೂ ಚಿತ್ರದ ಬಗೆಗಿನ ಕುತೂಹಲ ನೋಡಿದರೆ ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಅಂತ ಹೇಳಬಹುದು. ಚಿತ್ರ ಮತ್ತು ಕಥೆಗೆ ಎಷ್ಟು ಬಂಡವಾಳ ಬೇಕೋ ಅಷ್ಟು ಹಾಕಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಚಿತ್ರಕ್ಕೆ ಇರಲಿ ಎಂದು ಹೇಳಿದರು.

ನಿರ್ದೇಶಕ ಅರ್ಜುನ್ ಜನ್ಯ ಮಾತನಾಡುತ್ತಾ, 45 ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಡಬ್ಬಿಂಗ್ ಸೇರಿದಂತೆ ಎಲ್ಲಾ ಕೆಲಸ ಮುಗಿದಿದೆ. ಚಿತ್ರದಲ್ಲಿ ವಿ ಎಫ್ ಎಕ್ಸ್ ಕೆಲಸ ತುಂಬಾ ಇದೆ. ಕೆನಡಾದ ಹೆಸರಾಂತ MARZ ಸಂಸ್ಥೆ ವಿ ಎಫ್ ಎಕ್ಸ್ ಮಾಡಲಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಗ್ರಾಫಿಕ್ ಕೆಲಸ ಮುಗಿಯಲಿದೆ. ಆನಂತರ ಎರಡು ತಿಂಗಳು ಸಮಯವನ್ನು ಇಟ್ಟುಕೊಂಡು ಆಗಸ್ಟ್ 15 ಕ್ಕೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದೇವೆ. ಮೊದಲ ನಿರ್ದೇಶನದಲ್ಲೇ ಮಲ್ಟಿಸ್ಟಾರರ್ ಸಿನಿಮಾ ಮಾಡಿದ್ದೇನೆ ಎಂದು ಈಗಲೂ ನಂಬಲಾಗುತ್ತಿಲ್ಲ‌. ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರಂತಹ ಮಹಾನ್ ಕಲಾವಿದರು ನನ್ನ ಚಿತ್ರದಲ್ಲಿ ನಟಿಸಿದ್ದಾರೆ ಎಂದರೆ ಈಗಲೂ ಆಶ್ಚರ್ಯವಾಗುತ್ತಿದೆ. ಚಿತ್ರ ಚೆನ್ನಾಗಿ ಮೂಡಿಬರಲು ನಿರ್ಮಾಪಕರ ಹಾಗೂ ಚಿತ್ರತಂಡದ ಸಹಕಾರವೇ ಕಾರಣ ಎಂದರು.

ನಿರ್ದೇಶಕ ಮತ್ತು ನಿರ್ಮಾಪಕರ ಕಾಂಬಿನೇಷನ್ ಅದ್ಭುತ. ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ಮಾಡಿದ ಪರಿ ಮೆಚ್ಚುವಂತದ್ದು. ಈ ಸಮಾರಂಭ ನೋಡಿದರೆ ಚಿತ್ರದ ದಿನಾಂಕ ಪ್ರಕಟಣೆ ಮಾಡುವ ಸಮಾರಂಭದ ಹಾಗಿಲ್ಲ. ಬದಲಾಗಿ ಚಿತ್ರದ ಸಕ್ಸಸ್ ಮೀಟ್ ನಂತಿದೆ. ಶಿವಣ್ಣ ಅವರಿಗೆ ಎದುರು ನೋಡುತ್ತಿದ್ದೇವೆ. ಬೇಗ ಬನ್ನಿ ಎಂದರು ನಟ ಉಪೇಂದ್ರ.

ನಟ ರಾಜ್ ಬಿ ಶೆಟ್ಟಿ ಮಾತನಾಡಿ ಕನ್ನಡಿಗನಾಗಿ, ಕನ್ನಡ ಸಿನಿಮಾ ಪ್ರೇಕ್ಷಕನಾಗಿ 45 ಚಿತ್ರ ಬಿಡುಗಡೆಗಾಗಿ ಎದುರು ನೋಡುತ್ತಿದ್ದೇನೆ. ಉತ್ತಮ ತಂತಜ್ಞರ ಜೊತೆ ಕೆಲಸ ಮಾಡಿದ್ದು ನನ್ನ ಭಾಗ್ಯ. ಈ ಚಿತ್ರದಲ್ಲಿ ಕೆಲಸ ಮಾಡಲ್ಲ ಎಂದು ಅರ್ಜುನ್ ಜನ್ಯ ಅವರ ಬಳಿ ಹೇಳಿದ್ದೆ. ಏಕೆಂದರೆ ನಾನು ಚಿತ್ರ ನಿರ್ದೇಶನ ಮಾಡಬೇಕಾಗಿದೆ. ಅದರಿಂದ ಈ ಚಿತ್ರಕ್ಕೆ ತಡೆ ಆಗಬಾರದು ಎನ್ನುವದಷ್ಟೇ ನನ್ನ ಉದ್ದೇಶವಾಗಿತ್ತು. “45” ಚಿತ್ರ ಮೂಡಿ ಬಂದಿರುವ ಪರಿ ಆದ್ಭುತ. ಚಿಕ್ಕ ಕಲಾವಿದನಿಗೂ ಕೂಡ ಹೆಚ್ಚಿನ ಅವಕಾಶ ನೀಡಿದ ಶಿವಣ್ಣ ಮತ್ತು ಉಪೇಂದ್ರ ಅವರ ಅಭಿಮಾನಿಯಾಗಿ ಈ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು.

ಸಾಹಸ ನಿರ್ದೇಶಕರಾದ ಡಾ.ರವಿವರ್ಮ, ಡಿಫರೆಂಟ್ ಡ್ಯಾನಿ, ಛಾಯಾಗ್ರಾಹಕ ಸತ್ಯ ಹಗ್ಡೆ ಸೇರಿದಂತೆ ಚಿತ್ರತಂಡದ ಸದಸ್ಯರು ಮತ್ತು ಗಣ್ಯರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Tags: 45 Kannada MovieIndrajith LankeshKVNRaj B ShettyRamalinga Reddyshivaraj kumarSudheepupendraVenkata NarayanVFX
Previous Post

ಬಹುತೇಕ ಮುಕ್ತಾಯವಾಯಿತು “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಚಿತ್ರೀಕರಣ.‌ .

Next Post

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada