ಅಶ್ಲೀಲ ವಿಡಿಯೋ ಪ್ರಕರಣದ ನಂತರ ಕಿರುತೆರೆ ನಟಿ ಜ್ಯೋತಿ ರೈ (Jyothi Rai) ತಿರುಪತಿ ದೇವಾಲಯಕ್ಕೆ (Tirupathi Temple) ಭೇಟಿ ನೀಡಿದ್ದಾರೆ.

ನಟಿ ಜ್ಯೋತಿ ರೈ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿರುವ ಫೋಟೋಗಳು ವೈರಲ್ ಆಗಿವೆ. ತಮ್ಮ ಪತಿ ಪೂರ್ವಜ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ನಟಿ ಸಮಯ ಕಳೆದಿದ್ದಾರೆ. ನಟಿ ಸದ್ಯ ಅಶ್ಲೀಲ ವಿಡಿಯೋ ಪ್ರಕರಣದ ವಿಷಯವಾಗಿ ನೊಂದಿದ್ದಾರೆ. ಸೈಬರ್ ಕ್ರೈಂಗೆ ನಟಿ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅನುರಾಗ ಸಂಗಮ, ಜೋಗುಳ, ಗೆಜ್ಜೆಪೂಜೆ, ಲವಲವಿಕೆ, ಕನ್ಯಾದಾನ, ಪ್ರೇರಣಾ, ಕಿನ್ನರಿ, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಸೀರಿಯಲ್ಗಳಲ್ಲಿ ಜ್ಯೋತಿ ನಟಿಸಿದ್ದಾರೆ.