• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ

Any Mind by Any Mind
May 4, 2021
in ದೇಶ
0
NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಈವರೆಗೆ ಕೈಗೊಂಡಿರುವ ಕ್ರಮಗಳಿಗೆ‌ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ತನ್ನ ನಿಷ್ಕ್ರಿಯತೆಯಿಂದ ಸರ್ಕಾರವು ಜನರ ಪ್ರಾಣಹಾನಿ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

“ದುರ್ಬಲ ವರ್ಗಗಳಿಗೆ NYAY ಯೋಜನೆಯ ರಕ್ಷಣೆಯೊಂದಿಗೆ ಸಂಪೂರ್ಣ ಲಾಕ್‌ಡೌನ್ ಮಾಡುವುದೇ ಕರೋನಾದ ಹರಡುವಿಕೆಯನ್ನು ತಡೆಯುವ ಏಕೈಕ ಮಾರ್ಗ” ಎಂದು ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ.

GOI doesn’t get it.

The only way to stop the spread of Corona now is a full lockdown- with the protection of NYAY for the vulnerable sections.

GOI’s inaction is killing many innocent people.

— Rahul Gandhi (@RahulGandhi) May 4, 2021

ಭಾರತ ಸರ್ಕಾರವು ತನ್ನ ನಿಷ್ಕ್ರಿಯತೆಯಿಂದಾಗಿ ಅಮಾಯಕ ಜನರನ್ನು ಕೊಲ್ಲುತ್ತಿದೆ ಎಂದು ರಾಹುಲ್‌ ಆರೋಪ ಮಾಡಿದ್ದಾರೆ.

ಭಾರತ ಸರ್ಕಾರದ ಕಾರ್ಯತಂತ್ರಗಳೆಲ್ಲವೂ ವಿಫಲವಾಗಿರುವುದರಿಂದ ಸಂಪೂರ್ಣ ಲಾಕ್‌ಡೌನ್‌ ಮಾಡದೆ ಬೇರೆ ಉಪಾಯವೇ ಇಲ್ಲವೆಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ವೈರಸನ್ನು ಎಲ್ಲಾಕಡೆಯೂ ಹರಡಲು ಸರ್ಕಾರ ಬಿಟ್ಟಿದೆ. ಇದು ಭಾರತದ ವಿರುದ್ಧ ನಡೆದ ಅಪರಾಧ ಎಂದು ಅವರು ಹೇಳಿದ್ದಾರೆ.

I just want to make it clear that a lockdown is now the only option because of a complete lack of strategy by GOI.

They allowed, rather, they actively helped the virus reach this stage where there’s no other way to stop it.

A crime has been committed against India.

— Rahul Gandhi (@RahulGandhi) May 4, 2021

ಈ ಮೂಲಕ NYAY (ಕನಿಷ್ಟ ವೇತನ ಯೋಜನೆ)ಯ ಚರ್ಚೆಯನ್ನು ರಾಹುಲ್‌ ಗಾಂಧಿ ಮತ್ತೆ ಮುನ್ನೆಲೆಗೆ ತಂದಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯ ವೇಳೆ ಕಾಂಗ್ರೆಸ್‌ ಈ ಮಹತ್ವದ ಯೋಜನೆಯನ್ನು ತನ್ನ ಪ್ರಣಾಳಿಕೆಯಲ್ಲಿ ಮುಖ್ಯ ಅಂಶವಾಗಿ ಅಳವಡಿಸಿಕೊಂಡಿತ್ತು. ಆರ್ಥಿಕ ಕೆಳಸ್ತರದ ಕುಟುಂಬಗಳಿಗೆ ವಾರ್ಷಿಕ 72,000 ರುಪಾಯಿ ಆದಾಯದ ಖಾತರಿಯನ್ನು ಈ ಯೋಜನೆ ನೀಡುತ್ತದೆ.

ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಕೇರಳದಲ್ಲಿ ಜಾರಿಗೆ ತರುವುದಾಗಿ ಕೇರಳ ಚುನಾವಣಾ ಮತ ಪ್ರಚಾರದ ವೇಳೆ ಭರವಸೆ ನೀಡಿದ್ದರು.

ನೋಟ್‌ ಬ್ಯಾನ್‌ ಹಾಗೂ ಜಿಎಸ್‌ಟಿ ಮತ್ತು ಇತ್ತೀಚಿನ ಕರೋನಾ ಸಾಂಕ್ರಾಮಿಕದ ಮೂಲಕ ಕುಸಿದಿರುವ ಭಾರತದ ಆರ್ಥಿಕತೆಯನ್ನು ಮೇಲೆತ್ತಲು ಇದೊಂದೇ ದಾರಿ ಎಂದು ರಾಹುಲ್‌ ಗಾಂಧಿ ಬಲವಾಗಿ ಪ್ರತಿಪಾದಿಸುತ್ತಿದ್ದಾರೆ.

ಕಳೆದ ವಾರ, ಗಾಂಧಿ ಅವರು ಕೋವಿಡ್ ಎರಡನೇ ತರಂಗದಲ್ಲಿ ಭಾರತದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದರೂ ಸಹ ಕೇಂದ್ರ ಸರ್ಕಾರ ಹೊಣೆಗಾರಿಕೆಯನ್ನು ಹೊತ್ತಿಲ್ಲ ಎಂದು ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದರು.

Previous Post

ಕೆಂಪುಕೋಟೆ’ಯಲ್ಲಿ ಕೇಸರಿ ಪಾರುಪಥ್ಯಕ್ಕೆ ನಾಂದಿಹಾಡಿತೆ ವಾಮ ತಂತ್ರ?

Next Post

ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!