• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಎನ್ ಡಿಎ ಮೈತ್ರಿಕೂಟದ ಇನ್ನಿತರ ಪಕ್ಷಗಳು ಬೆಂಬಲಿಗರಷ್ಟೇ ಅಲ್ಲ, ಕಿಂಗ್ ಮೇಕರ್ಸ್!

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ಕರ್ನಾಟಕ, ದೇಶ, ರಾಜಕೀಯ
0
ಎನ್ ಡಿಎ ಮೈತ್ರಿಕೂಟದ ಇನ್ನಿತರ ಪಕ್ಷಗಳು ಬೆಂಬಲಿಗರಷ್ಟೇ ಅಲ್ಲ, ಕಿಂಗ್ ಮೇಕರ್ಸ್!
Share on WhatsAppShare on FacebookShare on Telegram

ನವದೆಹಲಿ: 2024ರ ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸನಿಹದಲ್ಲಿದ್ದರೂ ಬಿಜೆಪಿ ಪಾಲಿಗೆ ಇದು ನುಂಗಲಾರದ ತುತ್ತಾಗಿಯೇ ಇದೆ. ಇಲ್ಲಿ ಬಿಜೆಪಿಗೆ ಗೆದ್ದರೂ ಸೋತಂತೆಯೇ ಅನುಭವವಾಗಿದೆ.

ADVERTISEMENT

ಸದ್ಯ ಟ್ರೆಂಡ್ ನೋಡಿದರೆ, ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಇದ್ದರೂ ಬಿಜೆಪಿಯ ಸಂಖ್ಯಾ ಬಲ ಸರಳ ಬಹುಮತದ ಸನಿಹಕ್ಕೆ ಬರುವಂತೆ ಕಾಣುತ್ತಿಲ್ಲ. ಇದು ಬಿಜೆಪಿಯ ಹಾದಿಗೆ ಸಂಕಷ್ಟ ತಂದೊಡ್ಡಿದೆ. ಸದ್ಯದ ಸಂಖ್ಯಾಬಲ ಗಮನಿಸಿದರೆ, ಎನ್‌ಡಿಎ ಮೈತ್ರಿ ಕೂಟ ಅಂದಾಜು 290 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಲ್ಲಿದೆ. ಈ ಪೈಕಿ ಬಿಜೆಪಿ 238 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಲೋಕಸಭೆಯಲ್ಲಿ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆ ಏರಲು ಕನಿಷ್ಟ 272 ಸದಸ್ಯ ಬಲ ಬೇಕು. ಈ ಪೈಕಿ ಎನ್‌ಡಿಎ ಮೈತ್ರಿ ಕೂಟ 290 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದ್ದು, 3ನೇ ಅವಧಿಗೆ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ, ಬಿಜೆಪಿ ಸಂಖ್ಯಾ ಬಲ ಕುಸಿದಿರುವ ಕಾರಣ, ಎನ್‌ಡಿಎ ಮೈತ್ರಿ ಕೂಟದ ಮಿತ್ರ ಪಕ್ಷಗಳು ಮೂಗುದಾರ ಹಾಕುವ ಸಾಧ್ಯತೆ ಹೆಚ್ಚಾಗಿಯೇ ಇವೆ.

2019ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ 353 ಸ್ಥಾನಗಳಲ್ಲಿ ಗೆದ್ದಿತ್ತು. ಈ ವೇಳೆ ಬಿಜೆಪಿ ಪಕ್ಷವೊಂದೇ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಹೀಗಾಗಿ ಬಿಜೆಪಿಯೇ ನಿರ್ಣಾಯಕ ಎನ್ನುವಂತಾಗಿತ್ತು. ಈಗ ಈ ರೀತಿಯ ವಾತಾವರಣ ಬಿಜೆಪಿಗೆ ಇಲ್ಲದಂತಾಗಿದೆ. ಇನ್ನು ನಿತೀಶ್ ಕುಮಾರ್ ಸಾರಥ್ಯದ ಜೆಡಿಯು ಹಾಗೂ ಟಿಡಿಪಿ ತಲಾ 15 ಸ್ಥಾನಗಳಲ್ಲಿ ಗೆಲುವು ಕಾಣಬಹುದು ಎನ್ನಲಾಗುತ್ತಿದೆ. ಇವೆರಡೂ ಪಕ್ಷಗಳು ಎನ್‌ಡಿಎ ಮೈತ್ರಿ ಕೂಟದಲ್ಲಿ ಕಿಂಗ್ ಮೇಕರ್ ಪಾತ್ರ ವಹಿಸಲಿವೆ.

ಜೆಡಿಯು ಹಾಗೂ ಟಿಡಿಪಿ ಪಕ್ಷಗಳೆರಡೂ ತಮ್ಮ ನಿಷ್ಠೆ ಬದಲಿಸುವಲ್ಲಿ ಎತ್ತಿದ ಕೈ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿಯೇ ಇದೆ. ಜೆಡಿಯು ನಾಯಕ ನಿತೀಶ್ ಕುಮಾರ್ ಅವರಂತೂ 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಹಾರಿದ್ದರು. ಅದಕ್ಕೆ ಮುನ್ನ ಇಂಡಿಯಾ ಮೈತ್ರಿ ಕೂಟಕ್ಕೆ ಉಗಮಕ್ಕೆ ಕಾರಣರಾಗಿದ್ದ ನಾಯಕರಲ್ಲಿ ಅವರು ಒಬ್ಬರಾಗಿದ್ದರು. ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕೂಡಾ 2024ರ ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಮರಳಿದವರು. ಇದನ್ನೆಲ್ಲ ಗಮನಿಸಿದರೆ, ಮೋದಿ ಕೂಡ ಈ ಬಾರಿ ಕಿಂಗ್ ಮೇಕರ್ ಗಳ ಅಂಕುಶದಲ್ಲಿ ಆಡಳಿತ ನಡೆಸುವ ವಾತಾವರಣ ಎದುರಿಸಬೇಕಾಗುತ್ತದೆ.

Tags: ElectionModiTDP
Previous Post

ಕುಮಾರಸ್ವಾಮಿ, ಮೋದಿಗೆ ಜೈಕಾರ ಕೂಗಿದ ಕಾರ್ಯಕರ್ತರು..!

Next Post

ಗೆದ್ದನಪ್ಪೋ ಗೆದ್ದನೋ ಡಾ.ಮಂಜುನಾಥ ಗೆದ್ದನೋ..! 

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post

ಗೆದ್ದನಪ್ಪೋ ಗೆದ್ದನೋ ಡಾ.ಮಂಜುನಾಥ ಗೆದ್ದನೋ..! 

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!