ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)ರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
![](https://pratidhvani.com/wp-content/uploads/2024/05/WhatsApp-Image-2024-05-10-at-9.43.20-AM.jpeg)
ಕುದುರೆಮುಖ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದ. ಈತ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿದೆ. ಕಿಡ್ನಾಪ್ ಕೇಸ್ ಪ್ರಕರಣದಲ್ಲಿ ಈಗಾಗಲೇ ಎಚ್.ಡಿ. ರೇವಣ್ಣ ಜೈಲು ಪಾಲಾಗಿದ್ದಾರೆ. ಮಗ ಪ್ರಜ್ವಲ್ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ.
![](https://pratidhvani.com/wp-content/uploads/2024/05/WhatsApp-Image-2024-05-10-at-9.43.19-AM.jpeg)
ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ವಿಡಿಯೋಗಳು ಅಂತ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ. ವಿಡಿಯೋದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಮುಖ ಬ್ಲರ್ ಆಗಿಲ್ಲ. ಹೀಗಾಗಿ ಕೇಸ್ ಜಟಿಲವಾಗುವಂತಾಗಿದೆ.
ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೋಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ನಲ್ಲಿ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು.