• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬಿಡುಗಡೆಯಾಯಿತು ‘ಜವಾನ್’ ಚಿತ್ರದ ಪ್ರಿವ್ಯೂ , ಥ್ರಿಲ್‌ ಆದ ಫ್ಯಾನ್ಸ್‌

Any Mind by Any Mind
July 10, 2023
in ಸಿನಿಮಾ
0
ಬಿಡುಗಡೆಯಾಯಿತು ‘ಜವಾನ್’ ಚಿತ್ರದ ಪ್ರಿವ್ಯೂ , ಥ್ರಿಲ್‌ ಆದ ಫ್ಯಾನ್ಸ್‌
Share on WhatsAppShare on FacebookShare on Telegram

ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆಯಾಗಿದೆ.
‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಆರಂಭದಿಂದಲೂ ಬಹಳ ಕುತೂಹಲವಿತ್ತು. ಇಂದು ಬಿಡುಗಡೆಯಾದ ಟೀಸರ್, ಆ ನಿರೀಕ್ಷೆ ಮತ್ತು ಕುತೂಹಲಗಳನ್ನು ಇನ್ನೊಂದು ಹಂತಕ್ಕೆ ತಲುಪಿಸಿದೆ.

ADVERTISEMENT

ದೊಡ್ಡ ಬಜೆಟ್ ನಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಚಿತ್ರವು ಆಕ್ಷನ್ ಮತ್ತು ಎಮೋಷನ್ ಗಳನ್ನು ಹದವಾಗಿ ಹಿಡಿದಿಟ್ಟಿದೆ. ಚಿತ್ರದ ಕೆಲವು ಅದ್ಭುತ ಕ್ಷಣಗಳನ್ನು ಹಿಡಿದಿಡುವುದರ ಜೊತೆಗೆ, ‘ಜವಾನ್ ಪ್ರಪಂಚವನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ. ‘ಕಿಂಗ್ ಖಾನ್’ ಅವರ ಧ್ವನಿಯಲ್ಲಿ ಪ್ರಾರಂಭವಾಗುವ ಈ ಪ್ರಿವ್ಯೂ, ನಂತರ ಚಿತ್ರ ಏನಿರಬಹುದು ಎಂದು ಪರಿಚಯಿಸಿಕೊಡುತ್ತದೆ. ಈ ಪ್ರಿವ್ಯೂನ ಒಂದು ವಿಶೇಷತೆಯೆಂದರೆ, ಇದುವರೆಗೂ ನೀವು ನೋಡದೆ ಇರುವ ಶಾರುಖ್ ಅವರನ್ನು ಇಲ್ಲಿ ಹಲವು ಅವತಾರಗಳಲ್ಲಿ ನೋಡಬಹುದು. ಶಾರುಖ್ ಖಾನ್ ಅಲ್ಲದೆ, ಚಿತ್ರದಲ್ಲಿ ನಟಿಸಿರುವ ಹಲವು ಪ್ರತಿಭಾವಂತರ ತುಣುಕುಗಳು ಸಹ ಈ ಪ್ರಿವ್ಯೂನಲ್ಲಿ ಪರಿಚಯಿಸಲಾಗಿದೆ. ರೋಮಾಂಚನಗೊಳಿಸುವ ಆಕ್ಷನ್ ದೃಶ್ಯಗಳು, ಅದ್ದೂರಿ ಹಾಡುಗಳು, ‘ಬೇಕರಾರ್ ಕರಕೇ ಹಮೇ’ ಹಾಡಿಗೆ ಶಾರುಖ್ ಖಾನ್ ಅಭಿನಯ … ಇವೆಲ್ಲವೂ ಈ ಪ್ರಿವ್ಯೂ ಚಿತ್ರದ ಹೈಲೈಟ್ ಗಳಾಗಿದ್ದು, ಚಿತ್ರ ಬಿಡುಗಡೆಗೆ ಕಾಯುವಂತಾಗಿದೆ.

ದಕ್ಷಿಣ ಭಾರತದ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರಾದ ಅಟ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಅನಿರುದ್ಧ್ ರವಿಚಂದರ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ. ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿರುವ ಅನಿರುದ್ಧ್ ಅವರ ಹಿನ್ನೆಲೆ ಸಂಗೀತ ಈ ಪ್ರಿವ್ಯೂನ ಇನ್ನೊಂದು ಹೈಲೈಟ್. ಈ ಪ್ರಿವ್ಯೂನಲ್ಲಿ ಗಮನಸೆಳೆಯುವ ಇನ್ನೊಂದು ಅಂಶವೆಂದರೆ ಅದು ಗ್ರಾಮಿ ಪ್ರಶಸ್ತಿಗೆ ನಾಮಿನೇಟ್ ಆಗಿರುವ ರಾಜಕುಮಾರಿ ಅವರು ಹಾಡಿರುವ ‘ದಿ ಕಿಂಗ್ ಖಾನ್ ರಾಪ್’ ಎಂಬ ಹಾಡು.

‘ಜವಾನ್’, ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಚಿತ್ರವಾಗಿದ್ದು, ಅತ್ಯಂತ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ಶಾರುಖ್ ಜೊತೆಗೆ ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ವಿವಿಧ ಭಾಷೆಯ ನಟ-ನಟಿಯರು ಕಾಣಿಸಿಕೊಂಡಿದ್ದಾರೆ. ನಯನತಾರಾ, ವಿಜಯ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಗೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ದೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಿಯಾ ನಟಿಸಿರುವ ಈ ಚಿತ್ರವು ಎಲ್ಲ ಭಾಷೆಗಳ ಜನರಿಗೂ ತಲುಪವಂತೆ ಚಿತ್ರಿಸಲಾಗಿದೆ.

ಇದಕ್ಕೂ ಮುನ್ನ ಪೋಸ್ಟರ್ ಮತ್ತು ಸಣ್ಣ ಟೀಸರ್ ಮೂಲಕ ಜನರ ಗಮನ ಸೆಳೆದ ಟೀಸರ್, ಈಗ ಪ್ರಿವ್ಯೂ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದೆ. ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ನಡಿ ಗೌರಿ ಖಾನ್ ನಿರ್ಮಾಣ ಮಾಡಿದರೆ, ಗೌರವ್ ವರ್ಮ ಸಹ-ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ‘ಜವಾನ್’ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

Tags: anirudh ravichanderAtlee kumarJawanjawan movienayantharaSharukh Khan
Previous Post

ಅಕ್ರಮ ಚಟುವಟಿಕೆ ತಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ, ಕಲಬುರಗಿ ಪೊಲೀಸರ ಕ್ರಮ

Next Post

ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada