ಮೈಸೂರು: ರಾಜ್ಯ ಸರಕಾರದ ವಿರುದ್ದ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಗಲಭೆ ಪ್ರಕರಣದ ಬಗ್ಗೆ ಪ್ರತಾಪ್ ಸಿಂಹ(pratap simha) ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದರು.
ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ(karnataka) ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ.
ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಬಂದು ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಎಂದು ಕಿಡಿಕಾರಿದರು.